ಅವಿಶ್ವಾಸ ಗೊತ್ತುವಳಿ : ಭಾಷಣದ ನಂತರ PM ಮೋದಿಯನ್ನು ಅಪ್ಪಿಕೊಂಡ ರಾಹುಲ್ ಗಾಂಧಿ..!

ಆಡಳಿತಾರೂಢ ಎನ್ ಡಿಎ ಸರಕಾರದ ವಿರುದ್ಧ ವಿಪಕ್ಷಗಳ ‘ಅವಿಶ್ವಾಸ ಗೊತ್ತುವಳಿ’ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಆರಂಭಗೊಂಡಿದೆ. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾತನಾಡಿದ್ದು, ಕೇಂದ್ರ ಸರ್ಕಾರ, ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಪ್ರಖರ ವಾಗ್ದಾಳಿ ನಡೆಸಿದ್ದಾರೆ. ಭಾಷಣದ ಬಳಿಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ.

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣದ ಕೊನೆಯಲ್ಲಿ ‘ ನೀವು ನನ್ನನ್ನು ಅವಹೇಳನ ಮಾಡಬಹುದು, ನೀವು ನನ್ನನ್ನು ಪಪ್ಪು ಎಂದು ಕರೆಯಬಹುದು, ಆದರೆ ನಿಮ್ಮ ಬಗ್ಗೆ ನನ್ನಲ್ಲಿ ಕೊಂಚವೂ ಧ್ವೇಷ ಭಾವನೆಯಿಲ್ಲ, ನಿಜವಾದ ಅರ್ಥದಲ್ಲಿ ಹಿಂದೂ ಆಗಿರುವುದೆಂದರೆ ಇದೇ ‘ ಎಂದು ಹೇಳಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com