ಲಿಂಗಾಯಿತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆಗೆ ಒತ್ತಾಯಿಸಿ ಹಲವೆಡೆ ಪ್ರತಿಭಟನೆ

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಸಂಸದರು ಅಧಿವೇಶನದಲ್ಲಿ ಕೇಂದ್ರ ಮೇಲೆ ಒತ್ತಡ ಹೆರುವ ಸಲುವಾಗಿ ಇಂದು ರಾಜ್ಯಾಂದ್ಯಂತ ಕರ್ನಾಟಕ ಸಂಸದರ ಮನೆ ಮುಂದೆ ಸಾಂಕೇತಿಕ ವಾಗಿ ಧರಣಿ ನಡೆಸಲಾಯಿತು.

ಹುಬ್ಬಳ್ಳಿ :  ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಹುಬ್ಬಳ್ಳಿಯ ಸಿದ್ದಪ್ಪ ಕಂಬಳಿ ವೃತ್ತದಲ್ಲಿ ಲಿಂಗಾಯತರು ಧರಣಿ ನಡೆಸಿದರು.ರಾಷ್ಟ್ರೀಯ ಬಸವದಳ ಜಾಗತಿಕ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನ್ಯಾ. ನಾಗಮೋಹನದಾಸ ಅವರ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಲಾಗಿದೆ. ಈ ವಿಚಾರದಲ್ಲಿ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಅವರು ಕೇಂದ್ರ ಸರಕಾರಕ್ಕೆ ಒತ್ತಡ ಹಾಕುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಸರ್ಕಾರ ಕಳುಹಿಸಿರುವ ಶಿಫಾರಸು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಪ್ರಕ್ರಿಯೆ ಬಂದಿಲ್ಲ.  ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೊರಣೆಯ ವಿರುದ್ಧ ರಾಜ್ಯದ ಎಲ್ಲ ಸಂಸದರ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ ಇದೇ ರೀತಿ ನಿರ್ಲಕ್ಷ್ಯ ಧೋರಣೆ ತಾಳಿದ್ರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲೂ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಆಗ್ರಹಿಸಿ ಬಸವ ಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ‌ಬೈಕ್ ರ್ಯಾಲಿ ಮೂಲಕ ಬಿಜೆಪಿ ಸಂಸದರ ಮನೆಗೆ ತೆರಳಲಿರುವ ಬಸವಾಭಿಮಾನಿಗಳು, ಶಿವನಗರ ಬಡಾವಣೆಯ ಸಂಸದ ಭಗವಂತ ಖೂಬಾ ನಿವಾಸದ ಎದುರು ಕೂಡ ಧರಣಿ ನಡೆಸುತ್ತಿದ್ದಾರೆ.

ವಿಜಯಪುರದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮತ್ತು ಅಲ್ಪ ಸಂಖ್ಯಾತ ಮಾನ್ಯತೆಗಾಗಿ  ವಿಜಯನಗರದಲ್ಲಿರುವ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರಿಂದ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಕಚೇರಿ ಮುಂದೆ ಪ್ರತಿಭಟನೆ  ನಡೆಸುತ್ತಿದ್ದಾರೆ.  ಹಿಂದಿನ ಸರಕಾರ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಕೂಡಲೇ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ರಾಷ್ಟ್ರೀಯ ಬಸವ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ…

 

 

 

Leave a Reply

Your email address will not be published.

Social Media Auto Publish Powered By : XYZScripts.com