ವಿಜಯಪುರ : ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ನಿಧನ

ವಿಜಯಪುರ: ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 70 ವರ್ಷದ ವಿಮಲಾಬಾಯಿ ವಿಜಯಪುರದಲ್ಲಿರು ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯ ಹಿನ್ನೆಲೆ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯಲ್ಲೆ ಮೃತಪಟ್ಟ ವಿಮಲಬಾಯಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಕಾರ್ಯನಿರ್ವಹಣೆ ಮಾಡಿದ್ದರು.

ವಿಮಲಬಾಯಿ ಅವರ ಪಾರ್ಥಿವ ಶರೀರವನ್ನು  ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ಒಂದು ದಿನ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು. ಇವರಿಗೆ ಮೂವರು ಹೆಣ್ಣುಮಕ್ಕಳಿದ್ದರು. ನಾಲತವಾಡದಲ್ಲಿ ನಾಳೆ ಮದ್ಯಾಹ್ನ 12ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದಿಂದ ಮಾಹಿತಿ ದೊರಕಿದೆ.

Leave a Reply

Your email address will not be published.

Social Media Auto Publish Powered By : XYZScripts.com