ಉತ್ತರ ಪ್ರದೇಶ : ಬಾಂಗ್ಲಾ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ : ದಾಳಿ ಸಂಚು ವಿಫಲ..

ಬಾಂಗ್ಲಾದೇಶ ಮೂಲದ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ನೊಯಿಡಾದಲ್ಲಿ ಪೋಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ಮುಷರಪ್ ಹುಸೇನ್ ಹಾಗೂ ರುಬೆಲ್ ಅಹ್ಮದ್ ಎಂದು ಗುರುತಿಸಲಾಗಿದೆ. ನೊಯಿಡಾದಲ್ಲಿ ಅಡಗಿ ಕುಳಿತಿದ್ದ ಈ ಇಬ್ಬರು ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಆ್ಯಂಟಿ ಟೆರರ್ ಸ್ಕ್ವಾಡ್ ಹಾಗೂ ಪಶ್ಚಿಮ ಬಂಗಾಳ ಪೋಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿಲಾಗಿದೆ.

Image result for bangladesh terrorist arrested noida

‘ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಯನ್ನು ನಡೆಸಲು ಇಬ್ಬರೂ ಸೇರಿ ಸಂಚು ರೂಪಿಸುತ್ತಿದ್ದರು ‘ ಎಂದು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ.

Image result for bangladesh terrorist arrested noida

ಸ್ವಾತಂತ್ರ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.  ಪಾಕ್ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಲು ಯೋಜನೆ ಹೊಂದಿದೆ ಎಂದು ಭಾರತದ ಗುಪ್ತಚರ ಇಲಾಖೆ ಸ್ವಾತಂತ್ರ್ಯ ದಿನಾಚರಣೆಯ ಮುಂಜಾಗ್ರತವಾಗಿ ಎಚ್ಚರಿಕೆ ನೀಡಿದೆ.

Leave a Reply

Your email address will not be published.

Social Media Auto Publish Powered By : XYZScripts.com