ಹಾಸನ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ..

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ ಕಾರೇಕೆರೆ ಮುೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 9 ಗಂಟೆಯ ವೇಳೆ ಘಟನೆ ನಡೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಪ್ರಾರ್ಥನೆಗೆ ಹೋದ ಬಳಿಕ ತನ್ನ ಕೊಠಡಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಪೃಥ್ವಿರಾಜ್ (13) ನೇಣಿಗೆ ಶರಣಾಗಿದ್ದಾನೆ. ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಸಮೀಪದ ತಾವರೆಕೆರೆಯವನಾಗಿದ್ದ ತನಗೆ ನೀಡಿದ್ದ ಕೊಠಡಿಯಲ್ಲಿಯೇ ತನ್ನ ಟವಲ್ ಬಳಸಿ ನೇಣಿಗೆ ಶರಣಾಗಿದ್ದಾನೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com