ಮುಂಬೈ : ತೀವ್ರಗೊಂಡ ಮರಾಠ ಮೀಸಲು ಹೋರಾಟ : ಓರ್ವ ಪ್ರತಿಭಟನಾಕಾರ ಸಾವು…!

ಮುಂಬೈ :ಮರಾಠಾ ಸಮುದಾಯಕ್ಕೆ ಮೀಸಲು ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟವು ಮಹಾರಾಷ್ಟ್ರದಲ್ಲಿ ತೀವ್ರಗೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರತಿಭಟನಾಕಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೇ  ಇಂದು ಮೃತಪಟ್ಟಿದ್ದಾನೆ.
ಪ್ರತಿಭಟನೆ ವೇಳೆ ಮರಾಠ ಸಮುದಾಯದ ಸದಸ್ಯ ಜಗನ್ನಾಥ್ ಸೊನಾವ್ನೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.  ಇದರಂತೆ ಔರಂಗಾಬಾದ್ ಜಿಲ್ಲೆಯಲ್ಲೂ ಮತ್ತೊಬ್ಬ ಪ್ರತಿಭಟನಾಕಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಈ ಘಟನೆಗಳಿಂದ ಮಹಾರಾಷ್ಟ್ರದ ಹಲವೆಡೆ ವಾತಾವರಣ ಹದ್ದಗೆಟ್ಟಿದ್ದು. ಮಹಾರಾಷ್ಟ್ರದಲ್ಲಿಂದು ಬಂದ್ ಆಚರಿಸಲಾಗುತ್ತಿದೆ. ಈ ನಡುವೆ ಮರಾಠ ಸಮುದಾಯದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಪರಿಣಾಮ ಓರ್ವ ಪೇದೆ ಸಾವನ್ನಪ್ಪಿದ್ದು, ಇತರೆ 13 ಮಂದಿ ಪೇದೆಗಳು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಮೀಸಲು ಒದಗಿಸದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಬೇಕು ಹಾಗೂ ಮರಾಠ ಸಮುದಾಯದಲ್ಲಿ  ಕ್ಷಮೆಯಾಚಿಸಬೇಕೆಂದು ಮರಾಠಾ ಮೀಸಲು ಹೋರಾಟ ಸಮಿತಿ ಮುಖಂಡ ರವೀಂದ್ರ ಪಾಟೀಲ್ ಆಗ್ರಹಿಸಿದ್ದಾರೆ.  ಬಂದ್ ಹಿನ್ನೆಲೆ ಮುಂಬೈ- ಪುಣೆ ಹೆದ್ದಾರಿಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಶಾಲಾ-ಕಾಲೇಜುಗಳಿಗೆ ಆಯಾ ಸ್ಥಳೀಯ ಪರಿಸ್ಥಿತಿಗಳಿಗೆ ಅನುಸರಿಸಿ ರಜೆ ನೀಡುವಂತೆ ಸರ್ಕಾರ ಜಿಲ್ಲಾಡಳಿಗಳಿಗೆ ಸೂಚನೆ ನೀಡಿದೆ.

Leave a Reply

Your email address will not be published.

Social Media Auto Publish Powered By : XYZScripts.com