ಹುಬ್ಬಳ್ಳಿ : ಮತ್ತೆ ಕೇಳಿದ ಪ್ರತ್ಯೇಕ ರಾಜ್ಯದ ಕೂಗು : ಆಗಸ್ಟ್ 2 ರಂದು 13 ಜಿಲ್ಲೆಗಳಲ್ಲಿ ಬಂದ್ ಗೆ ಕರೆ

ಹುಬ್ಬಳ್ಳಿ – ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯವನ್ನಾಗಿ ಮಾಡಲು ಒತ್ತಾಯಿಸಿ ಅಗಸ್ಟ್ 2 ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬಂದ್ ಕರೆ ನೀಡಲಾಗಿದೆ. ಉತ್ತರ ಕರ್ನಾಟಕ ರಾಜ್ಯ ಪ್ರತ್ಯೇಕ ಹೋರಾಟ ಸಮಿತಿಯಿಂದ ಬಂದ್ ಕರೆ ನೀಡಲಾಗಿದ್ದು, ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಮಿತಿಯ ರಾಜ್ಯಧ್ಯಾಕ್ಷ ಸೋಮಶೇಖರ್ ಕೊತಂಬರಿ ಹೇಳಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ, ಉತ್ತರ ಕರ್ನಾಟಕ ರೈತ ಸಮಿತಿ, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳ ಒಕ್ಕೂಟ, ಚಲನಚಿತ್ರ ವಾಣಿಜ್ಯ ಮಂಡಳಿ, ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್ ಕರೆ ನೀಡಲಾಗಿದೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರತ್ಯೇಕದ ರಾಜದ ಕೂಗು ಕೇಳಿಬಂದಿದೆ.

Leave a Reply

Your email address will not be published.