21ನೇ ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತೆ ಅಶ್ವಿನಿ ಪೊನ್ನಪ್ಪಗೆ ಡಿಸಿಎಂ ಪರಮೇಶ್ವರ್ ಸನ್ಮಾನ

ಬೆಂಗಳೂರು : ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ನ ಬ್ಯಾಡ್ಮಿಂಟನ್ ಕ್ರೀಡೆಯ ಮಿಶ್ರ ಟೀಂ ವಿಭಾಗದಲ್ಲಿ ಹಾಗೂ ಮಹಿಳಾ ಡಬಲ್ಸ್ ನಲ್ಲಿ ಕಂಚು ಗೆದ್ದಿದ್ದ ಅಶ್ವಿನಿ ಪೊನ್ನಪ್ಪ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರು 33ಲಕ್ಷ ರೂ. ಚೆಕ್ ವಿತರಿಸಿ ವಿಧಾನ ಸೌಧ ಕಚೇರಿಯಲ್ಲಿ ಅಶ್ವಿನಿ ಪೊನ್ನಪ್ಪ ಅವರನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿದ ಡಿಸಿಎಂ ಪರಮೇಶ್ವರ್ , ಕಾಮನ್‌ವೆಲ್ತ್ ಗೇಮ್‌ನ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಅಶ್ವಿನಿ‌ಪೊನ್ನಪ್ಪ ಅವರಿಗೆ 25 ಲಕ್ಷ ಹಾಗೂ ಕಂಚಿಗೆ 8 ಲಕ್ಷ ರೂ. ಪುರಸ್ಕಾರ ನೀಡಲಾಗಿದೆ.  ನಮ್ಮ ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿರುವ ಅಶ್ವಿನಿ‌ ಪೊನ್ನಪ್ಪ ಅವರಿಗೆ ಅಭಿನಂದನೆ. ಒಲಂಪಿಕ್ಸ್‌ಗಾಗಿ ತಯಾರಿ ನಡೆಸುತ್ತಿರುವ ಇವರು, ಚಿನ್ನ‌ ಗೆಲ್ಲುವ‌ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿ‌ ಎಂದು ಆಶಿಸುತ್ತೇನೆ ಎಂದು ಹೇಳಿದ್ದರು.

ಒಲಂಪಿಕ್ಸ್‌ನಲ್ಲಿ ಚಿನ್ನ ಗೆದ್ದರೆ 5 ಕೋಟಿ, ಬೆಳ್ಳಿಗೆ 3 ಕೋಟಿ ಹಾಗೂ ಕಂಚು ಗೆದ್ದರೆ 2 ಕೋಟಿ‌ ರೂ. ನೀಡುವುದಾಗಿ ಸರಕಾರ ಘೋಷಿಸಿದೆ ಎಂದು ತಿಳಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com