Pakistan Election : ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ PTI : ಇಮ್ರಾನ್ ಖಾನ್ ಮುಂದಿನ PM ?

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಕ್ರಿಕೆಟರ್ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 272 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಪಿಟಿಐ ಪಕ್ಷ 117 ಸೀಟ್ ಗಳಲ್ಲಿ ಮುನ್ನಡೆ ಸಾಧಿಸಿದೆ. ಪಿಟಿಐ ಪಕ್ಷದ ಕಾರ್ಯಕರ್ತರು ಹಾಗೂ ಇಮ್ರಾನ್ ಖಾನ್ ಬೆಂಬಲಿಗರು ವಿಜಯದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಖ್ಯಾತ ಆಲ್ರೌಂಡರ್ ಇಮ್ರಾನ್ ಖಾನ್ ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಅಧಿಕಾರ ಹಿಡಿಯುವ ಸಾಧ್ಯತೆಗಳು ದಟ್ಟವಾಗಿವೆ. ಬಹುಮತಕ್ಕೆ 137 ಸೀಟ್ ಗಳ ಅಗತ್ಯವಿದ್ದು, ಪಿಟಿಐ ಬೇರೊಂದು ಪಕ್ಷದೊಂದಿಗೆ ಅಥವಾ ಇತರ ಅಭ್ಯರ್ಥಿಗಳೊಂದಿಗೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಬೇಕಾದ ಪ್ರಮೇಯ ೆದುರಾಗಬಹುದು.

ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನ್ ಮುಸ್ಲಿಮ್ ಲೀಗ್ – ನವಾಜ್ (PML-N) ಪಕ್ಷ 64 ಸೀಟುಗಳಲ್ಲಿ ಮುನ್ನಡೆ ಸಾಧಿಸಿ ಎರಡನೇ ಅತಿ ದೊಡ್ಡ ಪಕ್ವಾಗಿ ಹೊರಹೊಮ್ಮಿದೆ. ಇನ್ನು ಬಿಲಾವಲ್ ಭುಟ್ಟೋ ಜರ್ದಾರಿ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (PPP) 37 ಸೀಟುಗಳಲ್ಲಿ ಮುಂದಿದ್ದು, ಮೂರನೇ ಸ್ಥಾನದಲ್ಲಿದೆ. ಇತರರು 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com