ಕಾರವಾರ : ದಾಂಡೇಲಿ ಹೋರಾಟ ಸಮಿತಿ ಅಧ್ಯಕ್ಷ ಅಜಿತ್ ನಾಯ್ಕ್ ಭೀಕರ ಹತ್ಯೆ..!

ಕಾರವಾರ : ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ, ಹಿರಿಯ ವಕೀಲ ಅಜಿತ್ ನಾಯ್ಕ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಿರಿಯ ವಕೀಲ, ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷನನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಲಾಂಗ್ ನಿಂದ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ಬಸ್ ನಿಲ್ದಾಣದ ಬಳಿ ನಡೆದಿದೆ.
ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ್ದ ಅಜಿತ್ ದಾಂಡೇಲಿ ತಾಲೂಕು ಹೋರಾಟದಲ್ಲಿ ಸಕ್ರಿಯರಾಗಿದ್ದರು ಅವರನ್ನು ಹೋರಾಟ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಜಕೀಯದಲ್ಲಿಯೂ ಗುರುತಿಸಿಕೊಂಡಿದ್ದ ಇವರು ದಾಂಡೇಲಿ ನಗರಸಭಾ ಅಧ್ಯಕ್ಷ, ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ದಾಂಡೇಲಿ ತಾಲೂಕು ರಚನೆಯಾಗಬೇಕೆನ್ನುವುದು ಅಜಿತ್ ಅವರ ಕನಸಾಗಿತ್ತು. ಇದಕ್ಕಾಗಿ ಅವರು ಸತತ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದು ಹಲವು ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.ಇನ್ನು ಘಟನೆಯನ್ನು ಸ್ಥಳೀಯ ಮುಖಂಡರು ಖಂಡಿಸಿದ್ದು ದಾಂಡೇಲಿ ನಗರ ಬಂದ್ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನ ಈ ಘಟನೆಗೆ ಸಂಬಂಧ ದಾಂಡೇಲಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಭೇಟಿ ನೀಡಿದ್ದು ಆರೋಪಿ ಪತ್ತೆಗೆ ಸಕಲ ಕ್ರಮ ಕೈಗೊಳ್ಳುವುದಾಗಿ ಎಂದು ತಿಳಿಸಿದ್ದಾರೆ.

One thought on “ಕಾರವಾರ : ದಾಂಡೇಲಿ ಹೋರಾಟ ಸಮಿತಿ ಅಧ್ಯಕ್ಷ ಅಜಿತ್ ನಾಯ್ಕ್ ಭೀಕರ ಹತ್ಯೆ..!

Leave a Reply

Your email address will not be published.

Social Media Auto Publish Powered By : XYZScripts.com