ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ : ಸತೀಶ್ ಜಾರಕಿಹೊಳಿ

ಬೆಳಗಾವಿ : ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ ವಿಚಾರಕ್ಕೆ ಬೆಳಗಾವಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ ಅನ್ಯಾಯ ಆಗಿರೋದು ಮನವರಿಕೆ ಆದರೆ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಹಾಸನ, ಮಂಡ್ಯಕ್ಕೆ 200 ಕೋಟಿ ಕೊಟ್ಟ ತಕ್ಷಣ ಅನ್ಯಾಯ ಅಂತ ಹೇಳಕ್ಕೆ ಆಗಲ್ಲ ‘ ಎಂದಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಉಕ ಭಾಗಕ್ಕೆ ಸಾಕಷ್ಟು ಅನುದಾನ ಕೊಟ್ಟಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸಿಎಂ ಎಚ್ ಡಿ ಕೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ‘ ಈ ಭಾಗದ ಶಾಸಕರಾಗಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ; ಜನ ಜೆಡಿಎಸ್ ಪಕ್ಷಕ್ಕೆ ಓಟ ಹಾಕದೇ ಇರಬಹುದು. ಆದರೇ ಸಮ್ಮಿಶ್ರ ಸರ್ಕಾರದ ಭಾಗಿಯಾಗಿರೋ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ‘ ಎಂದು ಹೇಳಿದ್ದಾರೆ.

ಆಗಸ್ಟ್ 2ಕ್ಕೆ ಉತ್ತರ ಕರ್ನಾಟಕ ಬಂದ್ ಕರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ‘ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಸಿಎಂ ಭೇಟಿಗೆ ಚಿಂತನೆ ನಡೆಸಿದ್ದೇವೆ. ಸರ್ಕಾರದ ಗಮನ ಸಳೆಯುವ ಯತ್ನ ಹೋರಾಟ ಯಾರ ಬೇಕಾದ್ರು ಮಾಡಬಹುದು ‘ ಎಂದಿದ್ದಾರೆ.

‘ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ. ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ‘ ಎಂದು ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com