‘ಸರ್ಕಾರಕ್ಕೆ ಹಗರಣಗಳು ಬಯಲಾಗುತ್ತವೆ ಎಂಬ ಭಯ’ : ಹೆಚ್ ಡಿಕೆ ವಿರುದ್ದ ಬಿಎಸ್ ವೈ ಕಿಡಿ

ಬೆಂಗಳೂರು :  ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ಹಗರಣಗಳು ಬಯಲಾಗುತ್ತವೆ ಎಂಬ ಭಯದಿಂದ ಕುಮಾರಸ್ವಾಮಿ ಮಾಧ್ಯಮಗಳಿಗೆ ವಿಧಾನಸೌಧಕ್ಕೆ ನಿರ್ಬಂಧ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಮುಖ್ಯಮಂತ್ರಿ ಸರ್ವಾಧಿಕಾರಿಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

 ಬೆಂಗಳೂರಿನಲ್ಲಿಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಪ್ರತ್ಯೇಕ ರಾಜ್ಯ ಸಂಬಂಧ ವಿವಾದ ಸೃಷ್ಟಿಸುವುದು ಬೇಡ ಯಾರೂ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಸ್ತಾಪಿಸಬಾರದು, ರಾಜ್ಯ ಅಖಂಡ ಕರ್ನಾಟಕವೇ ಆಗಿರಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ತಿಳಿಸಿದ್ದರು. ರಾಜ್ಯ ಅಭಿವೃದ್ದಿಯೇ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ವಿಕಾಸಸೌಧ ಸ್ಥಾಪನೆ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಿದೆ. ಆದರೆ, ಅಧಿಕಾರದ ಸಲುವಾಗಿ  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ರಾಜ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಎಸ್ ವೈ ಆರೋಪಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com