ಕರುಣಾನಿಧಿ ಇರುವ ಆಸ್ಪತ್ರೆ ಮುಂದೆ ಅಭಿಮಾನಿಗಳ ದಂಡು : ಆರೋಗ್ಯ ಸ್ಥಿತಿ ಸ್ಥಿರವೆಂದ ವೈದ್ಯರು..

ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಆಸ್ಪತ್ರೆ ಎದುರು ಅಪಾರ ಅಭಿಮಾನಿಗಳು ಹಾಗೂ ಡಿಎಂಕೆ ಕಾರ್ಯಕರ್ತರು ಮಳೆಯಲ್ಲೇ ಜಮಾಯಿಸಿದ್ದರು.
 ಇನ್ನು, ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪುತ್ರ ಸ್ಟಾಲಿನ್‌, ಉತ್ತಮ ಆರೈಕೆ ನಡುವೆಯೂ ಕರುಣಾನಿಧಿ ಆರೋಗ್ಯದಲ್ಲಿ ಅನಿರೀಕ್ಷಿತವಾಗಿ ಮತ್ತಷ್ಟು ಏರುಪೇರಾಗಿದೆ. ಆದರೆ ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಈ ಬಗ್ಗೆ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಯಾವುದೇ ಭಯಪಡುವ ಅಗತ್ಯವಿಲ್ಲ. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ಕೆಲಸ ಮಾಡಬೇಡಿ. ಭದ್ರತಾ ಸಿಬ್ಬಂದಿಗೆ ಸಹಕರಿಸಬೇಕು ಎಂದು ಆಸ್ಪತ್ರೆ ಎದುರು ಜಮಾಯಿಸಿದ್ದ ಸಾವಿರಾರು ಜನರಿಗೆ ಮನವಿ ಮಾಡಿದರು.
ತಜ್ಞ ವೈದ್ಯರು ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕರುಣಾನಿಧಿ ಪತ್ನಿ, ಪುತ್ರ ಸ್ಟಾಲಿನ್‌, ಪುತ್ರಿ ಕನಿಮೋಳಿ ಸೇರಿದಂತೆ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲೇ ತಂಗಿದ್ದಾರೆ. ಇತ್ತ, ಕರುಣಾನಿಧಿ ಅವರ ಅಪಾರ ಅಭಿಮಾನಿಗಳು ಹಾಗೂ ಡಿಎಂಕೆ ಕಾರ್ಯಕರ್ತರು ಆಸ್ಪತ್ರೆಯ ಮುಂದೆ ಮಳೆಯಲ್ಲೇ ಜಮಾಯಿಸಿದ್ದರು. ಇದರಿಂದ ಸ್ಥಳದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದ್ದರೂ ಜನತೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.
ಇನ್ನ ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕಾಂಗ್ರೆಸ್​ ನಾಯಕರಾದ ಗುಲಾಮ್​ ನಬಿ ಆಜಾದ್​, ಪಿ. ಚಿದಂಬರಂ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಆಗಮಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com