ಅಖಂಡ ಕರ್ನಾಟಕವಿದ್ದರೇ ಗೌರವ, ಕೇಕ್ ಕಟ್ ಮಾಡಿದಂತೆ ಕತ್ತರಿಸುವುದು ಬೇಡ : ಗಂಗಾವತಿ ಪ್ರಾಣೇಶ

ಕೊಪ್ಪಳದ ಗಂಗಾವತಿಯಲ್ಲಿ ನಡೆಯುತ್ತಿರುವ 6 ನೇ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನ ಸಾಹಿತ್ಯ ಸಮ್ಮೇಳನದಲ್ಲಿ ಪ್ರತ್ಯೇಕ ರಾಜ್ಯದ ಕುರಿತು ಪ್ರಾಣೇಶ್ ಹೇಳಿಕೆ ನೀಡಿದ್ದಾರೆ. ಪ್ರತ್ಯೇಕ ರಾಜ್ಯದ ಬಗ್ಗೆ ಹಾಸ್ಯ ರೂಪದಲ್ಲಿ ತಮ್ಮ ಭಾಷಣದಲ್ಲಿ ಪ್ರಾಣೇಶ, ಕೇಕ್ ಉದಾಹರಣೆಯನ್ನು ತೆಗೆದುಕೊಂಡು ಪ್ರತಿಕ್ರಿಯೆ ನೀಡಿದ್ದಾರೆ.

‘ ರಾಜ್ಯವನ್ನು ಕೇಕ್ ನಂತೆ ಕತ್ತರಿಸುವುದು ಸರಿಯಲ್ಲ. ಪ್ರತ್ಯೇಕ ರಾಜ್ಯ ಕೂಗು ಸರಿಯಲ್ಲ, ಅಖಂಡ ಕರ್ನಾಟಕವಿದ್ದರೆ ರಾಜ್ಯಕ್ಕೆ ಗೌರವ. ಪ್ರತ್ಯೇಕ ರಾಜ್ಯಕ್ಕಿಂತ ಇಲ್ಲಿನ ಸಮಸ್ಯೆಗಳ ಬಗ್ಗೆ ಅವರಿಗೆ ಮನಮುಟ್ಟುವಂತೆ ತಿಳಿಸೋಣ. ಉತ್ತರ ಕರ್ನಾಟಕದ ಸಮಸ್ಯೆಗಳ ಗಮನ ಸೆಳೆಯುವ ಕೆಲಸ ಆಗಬೇಕು. ಮಹದಾಯಿ ಯೋಜನೆ ಹೋರಾಟ ನಡೆಯುವಾಗ ರೈತರನ್ನು ನಗಿಸುವ ಕೆಲಸ ಮಾಡಿದೆ. ತುಂಗಭದ್ರಾ ಹೂಳು ತೆಗೆಯುವಾಗ ನಮ್ಮ‌ ಹಾಸ್ಯ ತಂಡ ಭೇಟಿ ನೀಡಿ ಧನ ಸಹಾಯ ಮಾಡಿತ್ತು ‘ ಎಂದರು.

‘ ನಮ್ಮ ಕೈಯಲ್ಲಿ ಎಷ್ಟು ಸಹಾಯವಾಗುತ್ತೋ ಅಷ್ಟು ಮಾಡಬೇಕು. ಪ್ರತ್ಯೇಕ ರಾಜ್ಯಕ್ಕಿಂತ ಇಲ್ಲಿನ ಸಮಸ್ಯೆಗಳ ಪರಿಹಾರದ ಹಾದಿ ಹುಡುಕೋಣ ‘ ಎಂದು ಕೊಪ್ಪಳದ ಗಂಗಾವತಿಯಲ್ಲಿ ನಡೆದ 6 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com