ಪ್ರೀತಿಸಿದ ಯುವತಿಯ ಮನೆಯವರಿಂದ ಎಚ್ಚರಿಕೆ : ಮನನೊಂದು ಆತ್ಮಹತ್ಯೆಗೆ ಶರಣಾದ ಪ್ರೇಮಿ..!

ದಾವಣಗೆರೆ : ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಕ್ಯಾಂಪ್ ನಲ್ಲಿ ನಡೆದಿದೆ. ಮೃತ ಯುವಕ 22 ವರ್ಷದ ಗಣೇಶ ಶಿವಮೊಗ್ಗ ತಾಲ್ಲೂಕಿನ ನಾಗಸಮುದ್ರ ಗ್ರಾಮ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ.

ಈ ವಿಷಯ ತಿಳಿದ ಯುವತಿಯ ಮನೆಯವರು ಗಣೇಶನಿಗೆ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಇದರಿಂದ ಮನ ನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com