ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಜೈಲು ಶಿಕ್ಷೆ : ಬಿಬಿಎಂಪಿ ಖಡಕ್ ವಾರ್ನಿಂಗ್…! ಏನದು..?

ಬೆಂಗಳೂರು : ಸಿಲಿಕಾನ್ ಸಿಟಿ ಫ್ಲೇಕ್ಸ್ ಹಾಗೂ ಬ್ಯಾನರ್ ಗಳಿಂದ ಆವರಿಸಿಕೊಂಡಿದ್ದು.ರಾಜಕಾರಣಿಗಳು ಅವರ ಹುಟ್ಟಹಬ್ಬ ಬಂದರೆ ನಗರದ ತುಂಬಾ ಅವರದೇ ಫ್ಲೇಕ್ಸ್ ಗಳು ರಾರಾಜಿಸುತ್ತಿರುತ್ತದೆ. ಇದರಿಂದ ಹಲವರಿಗೆ ಪ್ರಾಣಹಾನಿ ಕೂಡ ಆಗಿದೆ. ಇದಕ್ಕೆಲ್ಲ ಬಿಬಿಎಂಪಿ ಫುಲ್ ಬ್ರೇಕ್ ಹಾಕಿದೆ. ಇನ್ನ ಮುಂದೆ ಪ್ಲೇಕ್ಸ್, ಬ್ಯಾನರ್ ಹಾಕಿದ್ದರೆ ಅವರಿಗೆ ಕ್ರಿಮಿನಲ್ ಕೇಸ್ ದಾಖಲು ಮಾಡಿಕೊಳ್ಳಾಲಾಗುವುದು  ಹಾಗೂ ಜೈಲು ಶಿಕ್ಷೆ ಖಚಿತ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಸಿದ್ದಾರೆ .

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಿದ್ದು, ಅವುಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಮೌಖಿಕ ಖಡಕ್ ಆದೇಶಕ್ಕೆ ಬಿಬಿಎಂಪಿ ತತ್ತರಿಸಿ ಕೊನೆಗೂ ಎಚ್ಚೆತ್ತುಕೊಂಡಿದೆ. ಕೆಲವು ಸಾರ್ವಜನಿಕ ಸಭೆ, ಸಮಾರಂಭಗಳ ವೇಳೆ ಬಾವುಟ, ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಬಳಕೆ ಮಾಡಲಾಗುತ್ತದೆ. ಹೀಗಾಗಿ ವಿವಿಧ ರಾಜಕೀಯ ಪಕ್ಷಗಳಿಗೂ ಆಯುಕ್ತರು, ಅನಧಿಕೃತವಾಗಿ ಬ್ಯಾನರ್ ಹಾಗೂ ಫ್ಲೆಕ್ಸ್ ಬಳಕೆ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ನಡೆದುಕೊಂಡರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976 ಮತ್ತು ಕರ್ನಾಟಕ ಓಪನ್ ಪ್ಲೇಸಸ್ (ಪ್ರಿವೆನ್ಶೆನ್ ಆಫ್ ಡಿಸ್‍ಫಿಗರ್ ಮೆಂಟ್) ಕಾಯ್ದೆ 1981ರ ಅಡಿಯಲ್ಲಿ ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಹೀಗಾಗಿ ತಪ್ಪಿತಸ್ಥರಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಕೆಲವು ಪ್ರಕರಣದಲ್ಲಿ ಜೈಲು ಶಿಕ್ಷಯ ಜೊತೆಗೆ ದಂಡ ವಿಧಿಸಲಾಗುತ್ತದೆ. ಜಾಹಿರಾತುದಾರರು, ಪ್ರಕಟಣೆಗಾರರು, ಮುದ್ರಣಗಾರರು, ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸಿ, ನಾಶಮಾಡಬಾರದು ಎಂದು ಕೋರ್ಟ್ ಸೂಚಿಸಿದ್ದು, ತೆರವು ಗೊಳಿಸಿರುವ ಫೋಟೋಗಳನ್ನು ಗುರುವಾರ ನೀಡಬೇಕು ಆದೇಶ ನೀಡಿತ್ತು. ಆಗಸ್ಟ್ 8ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಕಾರ್ಯಾಚರಣೆಯ ಸಂಪೂರ್ಣ ವರದಿ ನೀಡಲಾಗುವುದು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

One thought on “ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಜೈಲು ಶಿಕ್ಷೆ : ಬಿಬಿಎಂಪಿ ಖಡಕ್ ವಾರ್ನಿಂಗ್…! ಏನದು..?

  • August 3, 2018 at 7:40 AM
    Permalink

    Nice answer back in return of this issue with real arguments and
    telling everything about that.

    Reply

Leave a Reply

Your email address will not be published.

Social Media Auto Publish Powered By : XYZScripts.com