ಕೊಡಗು : ಮಾರ್ಬಲ್ ಅಂಗಡಿಯಲ್ಲಿ ಅಗ್ನಿ ಅವಘಡ : ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ

ಕೊಡಗು : ಮಾರ್ಬಲ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಸಂಭವಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರದಲ್ಲಿ ಸಂಭವಿಸಿದೆ.

ರಾಜಸ್ಥಾನ ಮೂಲದ ಪುರುಷೋತ್ತಮ ಅವರಿಗೆ ಸೇರಿದ  ಮಾರ್ಬಲ್  ಅಂಗಡಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿ ಸಂಭವಿಸಿದ ಸ್ವಲ್ಪ ಹೊತ್ತಿಗೆ ಸ್ಥಳಕ್ಕಾಗಮಿನಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೆ. ಈ ಘಟನೆಗೆ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com