ವಿದ್ಯುತ್ ಪೂರೈಕೆಗೆ ಮೂಲ ಸೌಕರ್ಯ ಸುಧಾರಿಸಲು ಉನ್ನತ ಮಟ್ಟದ ಸಭೆ ಕರೆಯಲು CM ಸೂಚನೆ..

ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆ ಕುರಿತು ಮೂಲ ಸೌಕರ್ಯ ಗಳನ್ನು ಸುಧಾರಿಸಲು ಉನ್ನತ ಮಟ್ಟದ ಸಭೆ ಕರೆಯಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆ ಗೆ ತೊoದರೆ ಆಗಬಾರದು. ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವ್ಹಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಗೆ ತೊoದರೆಯಾಗದಂತೆ ಲೈ ನ್ ಗಳನ್ನು ಹಾಕಬೇಕು ಎಂದು ತಿಳಿಸಿದರು. ಮರಗಳನ್ನು ಕಡಿಯುವುದನ್ನು ನಿಯಂತ್ರಿಸಲು ಸೂಚಿಸಿದರು.

ಬೆಂಗಳೂರು ನಗರದಲ್ಲಿ 3 ಸಾವಿರ ಮೆಗಾ ವ್ಯಾಟ್ ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದ ಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಲು, ಲೋಕೋಪಯೋಗಿ ಇ ಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊoಡ ಸಭೆ ಕರೆ ಯಲು ಮುಖ್ಯಮಂತ್ರಿ ಗಳು ಸೂಚಿಸಿದರು.

ಸಭೆಯಲ್ಲಿ ಆರ್ಥಿಕ ಇಲಾಖೆ , ಪ್ರಧಾನ ಕಾರ್ಯದರ್ಶಿ ಐ. ಎನ್. ಎಸ್ ಪ್ರಸಾದ್, ಇoಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋ ಳನ್ , ಮುಖ್ಯಮಂತ್ರಿ ಗಳ ಅಪರ ಮುಖ್ಯ ಕಾರ್ಯದರ್ಶಿ ಇ. ವಿ.ರಮಣ ರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com