ಆದಾಯ ತೆರಿಗೆ ಇಲಾಖೆಗೆ ವಂಚನೆ ಪ್ರಕರಣ : ಡಿಕೆಶಿ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು..!
ಬೆಂಗಳೂರು : ಆದಾಯ ತೆರಿಗೆ ಇಲಾಖೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ ಕೆ ಶಿವಕುಮಾರ್ ಜಾಮೀನು ಪಡೆದು ಹೊರಬಂದಿದ್ದಾರೆ. ಕೋರ್ಟ್ ಡಿಕೆಶಿಗೆ 50 ಸಾವಿರ ಬಾಂಡ್ ಇಬ್ಬರು ಶ್ಯೂರಿಟಿಯೊಂದಿಗೆ ಅವರ ಜೊತೆಗಿದ್ದ ಐವರಿಗೆ ಮ್ಯಾಜಿಸ್ಟ್ರೇಟ್ ಮಂಜೂರು ಮಾಡಿತ್ತು.
ಇಂದು ಕೋರ್ಟ್ ಗೆ ಹಾಜರದ ಡಿಕೆಶಿವಕುಮಾರ, ಹಿರಿಯ ವಕೀಲ ಬಿ.ವಿ ಆಚಾರ್ಯ ಮತ್ತು ನಂಜುಂಡ ರೆಡ್ಡಿ ಡಿಕೆಶಿ ಪರ ವಾದವನ್ನು ಮಂಡಿಸಿದ್ದರು. ಕೋರ್ಟ್ ವಾದವನ್ನು ಆಲಿಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 20ಕ್ಕೆ ಮುಂದೂಡಲಾಗಿದೆ.ನಂತರ ಕೋರ್ಟ್ ನಿಂದ ಹೊರ ಬಂದ ಡಿಕೆಶಿ ಮಾಧ್ಯಮಗಳಿಗೆ ಕೈ ಮುಗಿದು, ನ್ಯಾಯಲಯಕ್ಕೆ ತಲೆಬಾಗಿ ಬಂದಿದ್ದೇನೆ ಎಂದು ಅಲ್ಲಿಂದ ಹೊರಟರು.
ಆಯುಕ್ತರ ಬದಲು ನಿರ್ದೇಶಕರಿಂದ ಪೂರ್ವಾನುಮತಿ ಪಡೆಯಲಾಗಿತ್ತು. ಐಟಿ ದೂರಿಗೆ ಪೂರ್ವಾನುಮತಿ ಪಡೆದಿಲ್ಲ. ಇದರಿಂದ ಐಟಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಜಾಮೀನು ಮಂಜೂರು ಮಾಡುವಂತೆ ಡಿಕೆ ಶಿವಕುಮಾರ್ ಹಾಗೂ ಇತರೆ ಆರೋಪಿ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ.
ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ನ್ಯಾಯಾಲಯದ ನ್ಯಾ.ಎಂ.ಎಸ್. ಆಳ್ವಾ ಅವರು ಡಿಕೆ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.