ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಹೊರತು ಪ್ರಧಾನಿ ಹುದ್ದೆ ಅಲ್ಲ : ಮಮತಾ ಬ್ಯಾನರ್ಜಿ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಬದಲಿಗೆ ಬಿಜೆಪಿ ಸೋಲಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ.  ತೃತೀಯ ರಂಗದಲ್ಲಿ ವೇದಿಕೆ ಸಿದ್ದವಾಗುತ್ತಿರುವುದು ಬಿಜೆಪಿಯಲ್ಲಿ ನಡುಕ ಹುಟ್ಟಿಸಿದೆ. 2019ರಲ್ಲಿ ಕಮಲ ಫಿನಿಶ್ ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ.

ಕಳೆದೆರಡು ದಿನಗಳಿಂದ ದೆಹಲಿಯಲ್ಲಿರುವ ಮಮತಾ ಬ್ಯಾನರ್ಜಿ,  ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್, ಜೆಡಿಎಸ್ ಮುಖ್ಯಸ್ಥ ಹೆಚ್.ಡಿ,ದೇವೆಗೌಡ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.  ಕೋಲ್ಕತಾದಲ್ಲಿ ಜನವರಿ 19 ರಂದುಆಯೋಜಿಸಿರುವ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವಂತೆ ಹಲವು ನಾಯಕರಿಗೆ ಮಮತಾ ಬ್ಯಾನರ್ಜಿ ಆಹ್ವಾನ ನೀಡಿದ್ದರೆ ಎಂದು ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com