ಶಾಲೆಯ ಮೇಲ್ಛಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು : ಐವರಿಗೆ ಗಂಭೀರ ಗಾಯ

ಹೈದರಾಬಾದ್ : ಶಾಲೆಯ ಮೇಲ್ಛಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು  ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿರುವ ಘಟನೆ ಹೈದರಾಬಾದ್ ನ ಕುಕ್ಕಾಕಪಲ್ಲಿ ನಡೆದಿದೆ.

ಮದ್ಯಾಹ್ನದ ವೇಳೆ ವಿದ್ಯಾರ್ಧಿಗಳು ಕುಕ್ಕಟಪಲ್ಲಿ ಶಾಲೆಯಲ್ಲಿ ಎಂದಿನಂತೆ ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ತೊಡಗಿದ್ದರು. ಶಾಲೆಯಲ್ಲಿ ಕರಾಟೆ ಅಭ್ಯಾಸ ನಡೆಸುವ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದಿದೆ.  ಈ ಘಟನೆಯಿಂದ 4ನೇ ತರಗತಿ ವಿದ್ಯಾರ್ಥಿಗಳಾದ ಮಣಿಕೀರ್ತನ , ಚಂದನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನ ಐವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಷಕರು ಶಾಲಾ ಆಡಳಿತದ ವಿರುದ್ಧ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ಈ ಘಟನೆಗೆ ಸಂಬಂಧ ಶಾಲೆಯ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಕೊಳ್ಳಲಾಗಿದೆ ಎಂದು ಡಿಸಿಪಿ ವೆಂಕಟೇಶ್ವರ  ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com