Cricket : ವಿರಾಟ್ ಕೊಹ್ಲಿ ಅಮೋಘ ಶತಕ : ಆತಿಥೇಯರಿಗೆ ಮುನ್ನಡೆ, ಮಿಂಚಿದ ಸ್ಯಾಮ್ ಕರನ್

ಎಡ್ಜ್ ಬಾಸ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 274ಕ್ಕೆ ಆಲೌಟ್ ಆಯಿತು. ಇಂಗ್ಲೆಂಡ್ ಪಡೆಯ ಉತ್ತಮ ಬೌಲಿಂಗ್ ದಾಳಿ ಎದುರು ನಿರುತ್ತರರಾದ ಟೀಮ್ ಇಂಡಿಯಾ ಬ್ಯಾಟ್ಸಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಭಾರತದ ಪರವಾಗಿ ಏಕಾಂಗಿ ಹೋರಾಟ ನಡೆಸಿದ ನಾಯಕ ವಿರಾಟ್ ಕೊಹ್ಲಿ ಅಮೋಘ ಶತಕ ಬಾರಿಸಿದರು. 225 ಎಸೆತಗಳನ್ನು ಎದುರಿಸಿದ ಕೊಹ್ಲಿ 149 ರನ್ ಗಳಿಸಿ ಕೊನೆಯವರಾಗಿ ಔಟಾದರು.  ಸ್ಯಾಮ್ ಕರನ್ 4, ಆದಿಲ್ ರಾಶಿದ್ 2, ಜೇಮ್ಸ್ ಆ್ಯಂಡರ್ಸನ್ 2 ಹಾಗೂ ಬೆನ್ ಸ್ಟೋಕ್ಸ್ 2 ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್ ನಲ್ಲಿ 13 ರನ್ ಮುನ್ನಡೆ ಪಡೆದುಕೊಂಡ ಆತಿಥೇಯ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 1 ವಿಕೆಟ್ ನಷ್ಟಕ್ಕೆ 9 ರನ್ ಗಳಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com