Cricket : ಭುಜದ ಗಾಯ ಹಿನ್ನೆಲೆ : ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಒಳಗಾದ ವೃದ್ಧಿಮಾನ್ ಸಹಾ..

ಭುಜದ ಗಾಯಕ್ಕೆ ತುತ್ತಾಗಿರುವ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸಮನ್ ವೃದ್ಧಿಮಾನ್ ಸಹಾ ಬುಧವಾರ ಮ್ಯಾಚೆಂಸ್ಟರ್ ನ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆಯ ನಂತರ ವೃದ್ಧಿಮಾನ್ ಸಹಾ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿರುವ ಚಿತ್ರಗಳನ್ನು ಬಿಸಿಸಿಐ ಟ್ವೀಟ್ ಮಾಡಿದೆ.

‘ ವೃದ್ಧಿಮಾನ್ ಸಹಾ ಬಿಸಿಸಿಐ ಮೆಡಿಕಲ್ ತಂಡದವರ ಮೇಲುಸ್ತುವಾರಿಯಲ್ಲಿ, ಮ್ಯಾಚೆಂಸ್ಟರ್ ನಲ್ಲಿ ಯಶಸ್ವಿಯಾಗಿ ಲ್ಯಾಬ್ರಲ್ ರಿಪೇರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬೇಗ ಚೇತರಿಸಿಕೊಳ್ಳಲಿ ಎಂದು ಬಿಸಿಸಿಐ ಹಾರೈಸುತ್ತದೆ ‘ ಎಂದು ಟ್ವೀಟ್ ಮಾಡಿ ತಿಳಿಸಿದೆ.

ಭುಜದ ಗಾಯದ ಕಾರಣದಿಂದ ವೃದ್ಧಿಮಾನ್ ಸಹಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರಲಿಲ್ಲ. ವೃದ್ಧಿಮಾನ್ ಸಹಾ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com