ICC ಟೆಸ್ಟ್ ರ‍್ಯಾಂಕಿಂಗ್‌ : ಕೊಹ್ಲಿ ವಿಶ್ವದ ನಂಬರ್-1 ಬ್ಯಾಟ್ಸಮನ್ : ಸ್ಟೀವ್ ಸ್ಮಿತ್ ಹಿಂದಿಕ್ಕಿದ ವಿರಾಟ್

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಭಾನುವಾರ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬ್ಯಾಟ್ಸಮನ್ ಗಳ ರ್ಯಾಂಕಿಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಗ್ರ ಸ್ಥಾನವನ್ನು ಪಡೆದಿದ್ದು, ವಿಶ್ವದ ನಂಬರ್ ಒನ್ ಬ್ಯಾಟ್ಸಮನ್ ಎನಿಸಿದ್ದಾರೆ.

ನಂಬರ್ 1 ಸ್ಥಾನದಲ್ಲಿದ್ದ, ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್ ಮಾದರಿಯ ಕ್ರಿಕೆಟ್ ನಲ್ಲಿ ವಿಶ್ವ ನಂಬರ್ – 1 ಸ್ಥಾನಕ್ಕೇರಿದ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ನಾಯಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ಕ್ರಿಕೆಟಿಗ ಎನಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com