ಸಾಮಾಜಿಕ ಕ್ರಾಂತಿಕಾರ ಬಸವಣ್ಣನವರ ಸಾತ್ವಿಕ ಬದುಕು ನಮಗೆಲ್ಲ ಆದರ್ಶವಾಗಬೇಕು : BSY

ವಿಧಾನ ಸಭೆ ವಿರೋಧ ಪಕ್ಷ ನಾಯಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮವನ್ನು ಶ್ರೀ ಸುತ್ತೂರು ಮಠದ ಶ್ರೀಗಳ ನೇತೃತ್ವದಲ್ಲಿ ಮೈಸೂರಿನಲ್ಲಿ ಉದ್ಘಾಟಿಸಿದರು.

12ನೆಯ ಶತಮಾನದಲ್ಲಿ ಜಗತ್ತಿನಲ್ಲೇ ಅಪೂರ್ವವಾದ ಮಹಾ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರ ಸಾತ್ವಿಕರ ಬದುಕು ನಮಗೆ ಆದರ್ಶವಾಗಬೇಕು. ನಾವೆಲ್ಲರೂ ಪುಣ್ಯವಂತರು ಏಕೆಂದರೆ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಧರ್ಮ ಮತ್ತು ದಾರ್ಶನಿಕರು ಹುಟ್ಟಿದ ನಾಡಿನಲ್ಲೆ ಹುಟ್ಟಿದ್ದೇವೆ.

ಆದರೆ ಇತ್ತೀಚಿನ ದಿನಗಳಲ್ಲಿ ಧರ್ಮ ಮತ್ತು ದಾರ್ಶನಿಕರನ್ನ ಜಾತಿಯ ಮಟ್ಟಕ್ಕೆ ಇಳಿಸುವ ಪ್ರಯತ್ನ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಿ.ಪ್ರ.ಸ್ವ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ನಿ.ಪ್ರ.ಸ್ವ ಶ್ರೀ ಚಿದಾನಂದ ಮಹಾಸ್ವಾಮಿ ಹಾಗೂ ಅನೇಕ ಶರಣರು ಉಪಸ್ಥಿತರಿದ್ದರು

Leave a Reply

Your email address will not be published.

Social Media Auto Publish Powered By : XYZScripts.com