Cricket : 2ನೇ ಟೆಸ್ಟ್ ಪಂದ್ಯಕ್ಕೆ ಬೆನ್ ಸ್ಟೋಕ್ಸ್ ಅಲಭ್ಯ – ಕ್ರಿಸ್ ವೋಕ್ಸ್ ಗೆ ಅವಕಾಶ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 9 ರಿಂದ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ, ಆಲ್ರೌಂಡರ್ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದಾರೆ.

ಬೆನ್ ಸ್ಟೋಕ್ಸ್ ಬದಲು ವೇಗದ ಬೌಲರ್ ಕ್ರಿಸ್ ವೋಕ್ಸ್ ಅವರಿಗೆ ಎರಡನೇ ಟೆಸ್ಟ್ ಗಾಗಿ ಇಂಗ್ಲೆಂಡ್ ತಂಡದಲ್ಲಿ ಅವಕಾಶ ನಿಡಲಾಗಿದೆ. ಮುಂದಿನ ವಾರ ಬ್ರಿಸ್ಟಲ್ ನಗರದ ಕೋರ್ಟ್ ನಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದಾರೆ.

ಬ್ಯಾಟ್ಸಮನ್ ಡೇವಿಡ್ ಮಲಾನ್ ಅವರನ್ನು ಇಂಗ್ಲೆಂಡ್ ತಂಡದಿಂದ ಕೈಬಿಡಲಾಗಿದೆ. ಅವರ ಬದಲು ಆಲೀ ಪೋಪ್ ಗೆ ಸ್ಥಾನ ದೊರೆತಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಡೇವಿಡ್ ಮಲಾನ್ ಗೆ ಕೊಕ್ ನೀಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com