ಚೆನ್ನೈ : ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶ : ಗಣ್ಯರ ಸಂತಾಪ..

ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಂಗಳವಾರ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಗೋಪಾಲಪುರಂನಲ್ಲಿರುವ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ.

8.30 ರಿಂದ ರಾತ್ರಿ 1 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಮರೀನಾ ಬೀಚ್ ನಲ್ಲಿರುವ ಅಣ್ಣಾದೊರೈ ಸಮಾಧಿ ಪಕ್ಕದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಜಾಗ ನೀಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

ತಮಿಳುನಾಡಿನಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಲಾಗಿದೆ. ನಿಧನದ ಸುದ್ದಿ ತಿಳಿದ ನಂತರ ಕಾವೇರಿ ಆಸ್ಪತ್ರೆಯ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ಕರುಣಾನಿಧಿಯವರ ನಿಧನಕ್ಕೆ ದೇಶದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com