ಬೆಂಗಳೂರು : ಅನಾರೋಗ್ಯದಿಂದ ಖ್ಯಾತ ಕವಿ, ಲೇಖಕ ಸುಮತೀಂದ್ರ ನಾಡಿಗ ವಿಧಿವಶ..

ಕನ್ನಡದ ಖ್ಯಾತ ಸಾಹಿತಿ, ಕವಿ ಸುಮತೀಂದ್ರ ನಾಡಿಗ ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಸುಮತೀಂದ್ರ ನಾಡಿಗರು ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಹೆಂಡತಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಪುಟ್ಟೇನಹಳ್ಳಿಯ ಅವರ ನಿವಾಸದಲ್ಲಿ ಮಂಗಳವಾರ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರಾಗಿದ್ದ ಸುಮತೀಂದ್ರ ನಾಡಿಗರು, ಗೋಪಾಲಕೃಷ್ಣ ಅಡಿಗರ ಆಪ್ತರಾಗಿದ್ದರು. ದಾಂಪತ್ಯಗೀತೆ, ಪಂಚಭೂತಗಳು ಅವರ ಪ್ರಮುಖ ಕವನ ಸಂಕಲನಗಳಾಗಿವೆ. ನಾಡಿಗರು ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com