Cricket : ಲಾರ್ಡ್ಸ್ ಅಂಗಳದಲ್ಲಿ ಇಂದಿನಿಂದ 2ನೇ ಟೆಸ್ಟ್ : ತಿರುಗೇಟು ನೀಡುವುದೇ ಕೊಹ್ಲಿ ಪಡೆ..?

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಗುರುವಾರದಿಂದ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಕಳೆದ ಬಾರಿ 2014ರಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಲಾರ್ಡ್ಸ್ ಪಂದ್ಯವನ್ನು ಧೋನಿ ನಾಯಕತ್ವದ ಟೀಮ್ ಇಂಡಿಯಾ ಗೆದ್ದುಕೊಂಡಿತ್ತು. ಇದೀಗ ಕೊಹ್ಲಿ ಪಡೆ 4 ವರ್ಷಗಳ ಹಿಂದಿನ ಸಾಧನೆಯನ್ನು ಮರುಕಳಿಸುವ ಇರಾದೆಯನ್ನು ಹೊಂದಿದೆ.

ಎಡ್ಜ್ ಬಾಸ್ಟನ್ ಅಂಗಳದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ 31 ಅಂತರದಿಂದ ಜಯಿಸಿದ್ದ ಇಂಗ್ಲೆಂಡ್ ಸರಣಿಯಲ್ಲಿ 1-0 ಸಾಧಿಸಿದೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಕೊಹ್ಲಿ ಬಳಗ ಆತಿಥೇಯರಿಗೆ ತಿರುಗೇಟು ನೀಡುವ ತವಕದಲ್ಲಿದೆ. ಇನ್ನೊಂದೆಡೆ ರೂಟ್ ಬಳಗ ಲಾರ್ಡ್ಸ್ ಪಂದ್ಯ ಜಯಿಸುವ ಮೂಲಕ ಮುನ್ನಡೆಯನ್ನು ಹೆಚ್ವಿಸಿಕೊಳ್ಳಲು ಪ್ರಯತ್ನಿಸಲಿದೆ.

ಎಡಗೈ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಬದಲು ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಚೇತೇಶ್ವರ ಪೂಜಾರಾ ಅವರನ್ನು ಭಾರತ ಕಣಕ್ಕಿಳಿಸುವ ಸಾಧ್ಯತೆಯಿದೆ. ಕೋರ್ಟ್ ವಿಚಾರಣೆ ನಡೆಯುತ್ತಿರುವುದರಿಂದ ಇಂಗ್ಲೆಂಡಿನ ಪ್ರಮುಖ ಆಟಗಾರ ಬೆನ್ ಸ್ಟೋಕ್ಸ್ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com