ಕೇರಳದಲ್ಲಿ ವರುಣನ ಅಬ್ಬರ : ತುರ್ತು ಪರಿಹಾರಕ್ಕೆ ಮುಂದಾದ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದೆಲ್ಲೇಡೆ ವರುಣನ ಆರ್ಭಟ ಜೋರಾಗಿದ್ದು, ಕಳೆದೆರಡು ದಿನಗಳಿಂದ ಭಾರಿ ಮಳೆಯಿಂದಾಗಿ ಕೇರಳದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇದೀಗ ಕೇರಳ ನೆರವಿಗೆ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ.

 

ಮಳೆಯಿಂದಾಗಿ ತತ್ತರಿಸಿರುವ ಕೇರಳ ರಾಜ್ಯಕ್ಕೆ ತುರ್ತು ಪರಿಹಾರ ಕೈಗೊಳ್ಳಲು ಅಗತ್ಯವಾದ ಸಾಮಾಗ್ರಿಗಳನ್ನು ಕೂಡಲೇ ರವಾನಿಸುವಂತೆ ಮುಖ್ಯಕಾರ್ಯದರ್ಶಿ ವಿಜಯ್‌ ಭಾಸ್ಕರ್‌ಗೆ ಸೂಚಿಸಿದ್ದಾರೆ.  ಅಲ್ಲದೆ ಅಲ್ಲಿನ ಪರಿಸ್ಥಿತಿ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದಾರೆ, ಪರಿಹಾರ ನೀಡಿದ್ದಾರೆ.  ಕೇರಳ ರಾಜ್ಯಕ್ಕೆ ಆಹಾರ, ವೈದ್ಯಕೀಯ ಸಾಮಾಗ್ರಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಕರ್ನಾಟಕ ಸಿಎಂ ಹೆಚ್ ಡಿ ಕುಮಾರಸ್ವಾಮಿ.

Leave a Reply

Your email address will not be published.

Social Media Auto Publish Powered By : XYZScripts.com