ಕಾಸರಗೋಡು ಕನ್ನಡಿಗರ ಹಿತ ಕಾಪಾಡಲು ಆಗ್ರಹ : ಆಗಸ್ಟ್ 18ರಂದು ವಿಧಾನಸೌಧ ಎದುರು ಪ್ರತಿಭಟನೆ…!

ಮಂಗಳೂರು : ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕು ಹಾಗೂ ಜಿಲ್ಲೆಯಲ್ಲಿ ಕನ್ನಡಿಗರ ಹಿತ ಕಾಪಾಡಬೇಕೆಂದು ಆಗ್ರಹಿಸಿ ಆಗಸ್ಟ್ 18ರಂದು ಬೆಳಗ್ಗೆ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ  ನಡೆಸುತ್ತಿದ್ದಾರೆ.

ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಸಂವಿಧಾನ ಬದ್ದ ಕೆಲವು ಸವಲತ್ತುಗಳಿದ್ದರೂ ಕೇರಳ ಸರಕಾರ ಅದನ್ನು ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವನ್ನು ಎಚ್ಚರಿಸುವ ದೃಷ್ಟಿಯಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 18  ರಂದು ವಿಧಾನಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕಾಸರಗೋಡು ಕನ್ನಡ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಹೇಳಿದ್ದಾರೆ.

 

ನಗರ ಜಿಲ್ಲಾಧಿಕಾರಿ ಕಚೇರಿ ಎದುರು ಕಾಸರಗೋಡಿನಲ್ಲಿ ಕನ್ನಡ ಹಿತಕಾಪಾಡಲು ಹೋರಾಟ ಸಮಿತಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಾಸರಗೋಡು ಪ್ರದೇಶವನ್ನು ಭಾಷಾ ಅಲ್ಪಸಂಖ್ಯಾತ ಪ್ರದೇಶವೆಂದು ಕೇಂದ್ರ ಹಾಗೂ ಕೇರಳ ಸರ್ಕಾರ ಮಾನ್ಯತೆ ನೀಡಿದೆ. ಆದರೆ ಕನ್ನಡಿಗರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಮಾತ್ರ ಕೇರಳ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಕನ್ನಡಿಗರಿಗೆ ಇಲ್ಲಿ ಘೋರ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ನಾವೆಲ್ಲ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದರು.

 

ಕಾಸರಗೋಡು ಜಿಪಂ ಸದಸ್ಯ ಹರ್ಷದ್ ವರ್ಕಾಡಿ ಮಾತನಾಡಿ, ಕಾಸರಗೋಡು ಕರ್ನಾಟಕದ್ದೇ ಭಾಗ. ಕನ್ನಡ ಭಾಷೆ ಕಲಿಸಲು ಮಲಯಾಳಿ ಶಿಕ್ಷಕರನ್ನು ನೇಮಿಸುವುದು ಸರಿಯಲ್ಲ. ಕನ್ನಡಿಗರ ಅಸ್ತಿತ್ವದ ಹೋರಾಟಕ್ಕೆ ಕರ್ನಾಟಕದ ಬೆಂಬಲ ಬೇಕು. ಇಲ್ಲಿ ಸಂವಿಧಾನಬದ್ಧವಾಗಿ ಸಿಗಬೇಕಾದ ಸವಲತ್ತುಗಳು ಜನರಿಗೆ ಸಿಗಬೇಕು ಎಂದು ಒತ್ತಾಯಿಸಿದರು.

 

 

Leave a Reply

Your email address will not be published.