ಲಖನೌ : ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ : ಕಾರ್ಮಿಕರಿಗೆ ಗಂಭೀರ ಗಾಯ…!

ಲಖನೌ :  ನಿರ್ಮಾಣಹಂತದ ಮೇಲ್ಸೇತುವೆಯ ಒಂದು ಭಾಗ ಕುಸಿದುಬಿದ್ದಿರುವ ಘಟನೆ ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28ರಲ್ಲ್ಲಿ ಸಂಭವಿಸಿದೆ. ಈ ಘಟನೆ ವೇಳೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಹಲವರು ಅವಶೇಷದಡಿ ಸಿಲುಕಿ ಹಾಕಿಕೊಂಡಿರುವ ಶಂಕೆಯಿದ್ದು, ಗಾಯಗೊಂಡ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ವಿಸ್ ರಸ್ತೆಯಲ್ಲಿ ಸಾಗುತ್ತಿದ್ದ ಓವರ್‌ಲೋಡ್ ಆಗಿದ್ದ ಲಾರಿಯೊಂದು ನಿರ್ಮಾಣಹಂತದ ಮೇಲ್ಸೇತುವೆಗೆ ಢಿಕ್ಕಿಯಾದ ಪರಿಣಾಮ ಮೇಲ್ಸೇತುವೆ ಕುಸಿದುಬಿದ್ದಿದೆ ಎನ್ನಲಾಗಿದೆ.

ಲಕ್ನೋದಿಂದ 250 ಕಿ.ಮೀ.ದೂರದಲ್ಲಿ ಈ ಘಟನೆ ನಡೆದಿದ್ದು,  ನಿರ್ಮಾಣಹಂತದ ಮೇಲ್ಸೇತುವೆ ಕುಸಿತದ ಅವಶೇಷದಡಿ ಇಬ್ಬರು ಸಿಲುಕಿಹಾಕಿಕೊಂಡಿದ್ದಾರೆ. ತಕ್ಷಣವೇ ರಕ್ಷಣಾಕಾರ್ಯವನ್ನು ಕೈಗೆತ್ತಿಕೊಂಡು ಹೈವೇಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ತಡೆಯಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್ ಸ್ಥಳೀಯಾಡಳಿತಕ್ಕೆ ಸೂಚಿನೆ ನೀಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com