ಪ್ರಜ್ವಲ್ ರೇವಣ್ಣ ರಾಜಕೀಯ ಎಂಟ್ರಿ: ರಾಜ್ಯಾಧ್ಯಕ್ಷ ರಿಂದ ಗ್ರೀನ್ ಸಿಗ್ಮಲ್…!

 

ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮಾತನಾಡಿದ್ದಾರೆ.
ಪ್ರಜ್ವಲ್ ರಾಜಕೀಯ ಭವಿಷ್ಯ ಉಜ್ವಲವಾಗಿದೆ. ಆತನಿಗೆ ಸಾಕಷ್ಟು ದೂರದೃಷ್ಟಿ ಇದ್ದು, ಕನ್ನಡ ಹಾಗೂ ಇಂಗ್ಲಿಷ್ ಭಾಷೆ ಮೇಲೆ ಹಿಡಿತವಿದೆ. ಹೀಗಾಗಿ ಆತ ರಾಜಕೀಯದಲ್ಲಿ ಉತ್ತಮವಾಗಿ ಬೆಳೆಯುವ ಭರವಸೆಯ ನಾಯಕನಾಗಲಿದ್ದಾರೆ ಎಂದು ಬಣ್ಣಿಸಿದ್ದಾರೆ ಎಚ್ವಿ.

ರಾಜಕೀಯ ಇತಿಹಾಸ ಹೊಂದಿರುವ ಕುಟುಂಬದಿಂದ ಬಂದಿರುವ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಎನ್ನುವುದು ಬೇರೆ ವಿಷಯ. ಆದರೆ ಆತನಿಗೆ ಒಳ್ಳೆಯ ದೂರ ದೃಷ್ಟಿ ಇದೆ. ಹೀಗಾಗಿ ಮುಂದೆ ಒಳ್ಳೆಯ ನಾಯಕನಾಗಿ ಬೆಳೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

Leave a Reply

Your email address will not be published.