ಉಡುಪಿ : ಅಲೆಗಳ ಹೊಡೆತಕ್ಕೆ 2ದೋಣಿ ಮುಳುಗಡೆ : 16ಮಂದಿ ರಕ್ಷಣೆ….!

ಉಡುಪಿ : ದೋಣಿಗಳೆರಡು ಸಮುದ್ರದ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳಗಿ ಹೋಗಿರುವ ಘಟನೆ  ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ನಡೆದಿದೆ.

ಈ ಘಟನೆಯಿಂದ ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಮೀನುಗಾರಿಕೆ ದೋಣಿಗಳು ಭಟ್ಕಳದ ಗಂಗೊಳ್ಳಿ ನಡುವೆ ಮುಳುಗಡೆಯಾಗಿದೆ. ಎರಡು ಪ್ರತ್ಯೇಕ ದೋಣಿಗಳು ಕಣ್ಣೆದುರೇ ಎರಡು ಕೋಟಿ ಬೆಲೆಯ ದೋಣಿಗಳು ಮುಳುಗಡೆಯಾಗಿದ್ದು, ರಕ್ಷಣೆಯ ವೀಡಿಯೊ ಬಹಳ ರೋಚಕವಾಗಿದೆ. 

 

ಶಿವದಾಸ್​ ಮತ್ತು ಪದ್ಮದಾಸ್​ ಎಂಬ ಬೋಟುಗಳು ಮುಳುಗಡೆಯಾಗಿದ್ದು. ಈ ಬೋಟುಗಳಿದ್ದ 16ಮಂದಿಯನ್ನು ಭಜರಂಗಿ ಬೋಟುಗಾರರು ರಕ್ಷಿಸಿದ್ದಾರೆ.

ಸಮುದ್ರದ ನಡುವೆ ಗಾಳಿ ಮಳೆ ಬೀಸುತ್ತಿದ್ದರಿಂದ ಮುಳುಗುತ್ತಿದ್ದ ದೋಣಿಯಿಂದ ಮೀನುಗಾರರು ಸಮುದ್ರಕ್ಕೆ ಹಾರಿ ರಕ್ಷಣೆಗೆ ತೆರಳಿದ ದೋಣಿಯಿಂದ ಹಗ್ಗ ಎಸೆದು ಅವರನ್ನು ರಕ್ಷಿಸಲಾಗಿದೆ. ಕೆಲ ಮೀನುಗಾರರಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ಅವರೆಲ್ಲರೂ ಈಗ ಚೇತರಿಸಿಕೊಂಡಿದ್ದಾರೆ. ಈ ಎರಡು ಮುಳುಗಡೆಯಾಗುವ ದೋಣಿಯಲ್ಲಿದ್ದವರ ರಕ್ಷಣೆಯ ವಿಡಿಯೋ  ಸಾಕಷ್ಟು ವೈರಲ್ ಆಗಿದೆ.

Leave a Reply

Your email address will not be published.

Social Media Auto Publish Powered By : XYZScripts.com