ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ರೆ ರೈತರ ಸಮಸ್ಯೆ ಬಗೆಹರಿಯಲ್ಲ : ಸಿಎಂಗೆ BSY ಟಾಂಗ್

ಗದಗ : ‘ ಏರ್ ಶೋ‌ ಲಖ್ನೋಗೆ ಶಿಪ್ಟ ಆಗಲ್ಲ ‘ ಎಂದು ಗದಗನಲ್ಲಿ ವಿಪಕ್ಷ ನಾಯಕ‌ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ‘ ಬೆಂಗಳೂರು ಬಿಟ್ಟು ಹೋಗದಂತೆ ಬಿಜೆಪಿಯ ಎಲ್ಲ ಕೇಂದ್ರ ಸಚಿವರು, ಸಂಸದರು ಪ್ರಯತ್ನ ಮಾಡ್ತೀವಿ. ಡಿಸಿಎಂ ಪರಮೇಶ್ವರ ಹಾಗೂ ಸಚಿವ ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ ‘ ಎಂದಿದ್ದಾರೆ.

‘ ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ಸ್ಥಳಾಂತರ ಬಗ್ಗೆ ಚರ್ಚೆ ಸರಿಯಲ್ಲ ‘ ಎಂದು ಕಾಂಗ್ರೆಸ್ ವಿರುದ್ಧ ಬಿ.ಎಸ್.ವೈ ಕಿಡಿ ಕಾರಿದ್ದಾರೆ.

ಸಿಎಂ ಭತ್ತ ನಾಟಿ ವಿಚಾರವಾಗಿ ಮಾತನಾಡಿದ ಅವರು ‘ ಉತ್ತರ ಕರ್ನಾಟಕದ ೧೩ ಜಿಲ್ಲೆಯಲ್ಲಿ ತೀವ್ರ ಬರಗಾಲ ಇದೆ. ರಾಜಕೀಯ ದೊಂಬರಾಟ ಬಿಟ್ಟು ರೈತರ ಜ್ವಲಂತ ಸಮಸ್ಯೆಗಳ ಇತ್ಯರ್ಥ ಮಾಡಲಿ. ನಾಟಿ ಮಾಡಿದ್ರೆ ರೈತರ ಸಮಸ್ಯೆ ಬಗೆಹರಿಯಲ್ಲ. ಉತ್ತರ ಕರ್ನಾಟಕದಲ್ಲಿ ತೀವ್ರ ಬರಗಾಲ ಇದೆ ಸಿ.ಎಂ ಕುಮಾರಸ್ವಾಮಿ ಪ್ರವಾಸ ಮಾಡಿ ರೈತರ ಸಮಸ್ಯೆ ಅರಿಯಲಿ ‘ ಎಂದು ಬಿಎಸೈ ಸಲಹೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com