ಮಂಡ್ಯ : ಸಾರಿಗೆ ಸಚಿವರ ತವರು ಜಿಲ್ಲೆಯಲ್ಲಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಹೋರಾಟ…!

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡಿ, ಕೊನೆಗೆ ಸಾರಿಗೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಪ್ರತಿ ದಿನ ಕಾಲೇಜಿಗೆ ಹೊರಡುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿಲ್ಲದೆ ಪರದಾಡಬೇಕಾಗಿದೆ‌. ಇದರಿಂದ ಕಾಲೇಜು, ಶಾಲೆಗೆ ತಡವಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿಗಳು ಕೊನೆಗೆ ವಿಧಿ ಇಲ್ಲದೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪರಿಸ್ಥಿತಿಯನ್ನು ಅವಲೋಕನ ಮಾಡಿದ ಪೊಲೀಸರು ಮಧ್ಯೆ ಪ್ರವೇಶ ಮಾಡಿ, ಬಸ್‌ಗಳನ್ನು ತಡೆದು ಕೊನೆಗೆ ವಿದ್ಯಾರ್ಥಿಗಳನ್ನು ಹತ್ತಿಸುವ ಮೂಲಕ ಪರಿಹಾರ ನೀಡಿದರು.

ಆದರೆ ಪ್ರತಿದಿನ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾರಿಗೆ ಸಚಿವ ಡಿ.ಸಿ‌.ತಮ್ಮಣ್ಣ ನಮ್ಮ ಜಿಲ್ಲೆಯವರಾಗಿದ್ದಾರೆ‌. ಆದರೂ ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ‌. ಇನ್ನಾದರೂ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂಬ ಮಾತುಗಳು ಕೇಳಿ ಬಂದಿವೆ‌.

Leave a Reply

Your email address will not be published.

Social Media Auto Publish Powered By : XYZScripts.com