ಮಂಡ್ಯ : ವ್ಯಾಪಾರದಲ್ಲಿ ನಷ್ಟ ಹಿನ್ನೆಲೆ : ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ..!

ಮಂಡ್ಯ : ವ್ಯಾಪಾರದಲ್ಲಿ ನಷ್ಟ ಹಿನ್ನಲೆ‌ಯಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಮೈಸೂರು – ಬೆಂಗಳೂರು ಹೆದ್ದಾರಿಯ ಗಣಂಗೂರು ಫಾರೆಸ್ಟ್ ಬಳಿ ನಡೆದಿದೆ. ತಮ್ಮ ಓಮ್ನಿ ವಾಹನದಲ್ಲಿ ವಿಷ ಕುಡಿದು ಒದ್ದಾಡುತ್ತಿದ್ದರು.

ಪಾಂಡವಪುರ ತಾಲೂಕು ದೊಡ್ಡ ಬ್ಯಾಡರಹಳ್ಳಿ ಗ್ರಾಮದ ಮರೀಗೌಡ (48) ಪತ್ನಿ ರಜಿನಿ (44) ಮಕ್ಕಳಾದ ಚಂದ್ರ (13) ಚೇತನ್ (10) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾರಿನಲ್ಲಿ ವಿಷ ಸೇವಿಸಿ ಅಸ್ವಸ್ಥರಾದವನ್ನು ಕಂಡು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದವರ ಸ್ಥಿತಿ ಗಂಭೀರ, ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com