ಮುಂದುವರೆದ ವರುಣನ ಅಬ್ಬರ : ಮಳೆ ನಿಲ್ಲಲ್ಲೆಂದು ಪ್ರಾರ್ಥನೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ವರುಣನ ಆರ್ಭಟ ಹೆಚ್ಚುತ್ತಿದ್ದು,  ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎರಡು ದಶಕದ ಬಳಿಕ ಸುರಿಯುತ್ತಿರೋ ಭಾರಿ ಮಳೆಯಿಂದ ಜನ ಕಂಗಾಲಾಗಿದ್ದು, ಮಳೆ ನಿಲ್ಲಲ್ಲೆಂದು ಜನರು ವರುಣನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಶಿವಮೊಗ್ಗ : ಶಿವಮೊಗ್ಗದಲೂ ಎಡಬಿಡದೇ ಮಳೆ ಸುರಿಯುತ್ತಿದ್ದು. ತೀರ್ಥಹಳ್ಳಿಯ ಶ್ರೀ ರಾಮಮಂಟಪ ಕಳೆದ ರಾತ್ರಿ ಸುರಿದ ಮಳೆಗೆ ಜಲಾವೃತಗೊಂಡಿದೆ.
ಅಪಾಯದ ಸ್ಥಿತಿಯಲ್ಲಿ ತುಂಗಾನದಿ ಪ್ರವಾಹ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಅಪಾರ ಹಾನಿ ಉಂಟಾಗಿದ್ದ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ವಿಷಯವನ್ನು ಜಿಲ್ಲಾ ಆಡಳಿತ ತಕ್ಷಣ ತೀರ್ಥಹಳ್ಳಿ ಸ್ಥಿತಿಯತ್ತ ಗಮನ ಹರಿಸಲು ನಿವಾಸಿಗಳು ಆಗ್ರಹಿಸಿದ್ದಾರೆ…

 

ಮಲೆನಾಡಿನಲ್ಲೂ ಮುಂದುವರೆದ ಮಳೆ ಅಬ್ಬರಕ್ಕೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  ಇಡೀ ರಾತ್ರಿ ಸುರಿದ ಮಳೆಗೆ ಶೃಂಗೇರಿಯ ಪ್ಯಾರಲಲ್ ರಸ್ತೆ, ಗಾಂಧಿ ಮೈದಾನ ಮುಳುಗಡೆ ಹಾಗೂ ಸಂಧ್ಯಾವಂದನೆ ಮಂಟಪ ಹಾಗೂ ಕಪ್ಪೆ ಶಂಕರನಾರಾಯಣ ದೇವಾಲಯ ಮುಳುಗಡೆಯಾಗಿದೆ. ಭಾರಿ ಮಳೆಗೆ ಜನ ಕಂಗಾಲಾಗಿದ್ದು, ಮಳೆ ನಿಲ್ಲಲ್ಲೆಂದು ವರುಣನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ..

ಕಳೆದ ಆರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಹೈರಾಣಗಿದ್ದಾರೆ. ಧಾರಾಕಾರ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕುದುರೆಮುಖ, ಕಳಸ, ಬಾಳೆಹೊನ್ನೂರಿನಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ.  ಅಪಾಯಮಟ್ಟ ಮೀರಿ  ಭದ್ರಾ, ತುಂಗಾ, ಹೇಮಾವತಿ ನದಿ ಹಾಗೂ ಹಳ್ಳಗಳು ಹರಿಯುತ್ತಿದೆ. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶ್ರೀರಂಗಯ್ಯ ರಜೆ ಘೋಷಣೆ ಮಾಡಿದ್ದಾರೆ.

ಬೆಂಬಿಡದೇಸುರಿಯುತ್ತಿರುವ ಆಶ್ಲೇಷ ಮಳೆಯಿಂದ ಹೇಮಾವತಿ ನದಿಗೆ ಮತ್ತೆ ಹೆಚ್ಚಾದ ಒಳಹರಿವಿನ  ಹೆಚ್ಚಾಗಿದೆ. 14ಸಾವಿರ ಕ್ಯೂಸೆಕ್ ನೀರನ್ನ  ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೊರಬಿಟ್ಟರು.  6 ಕ್ರಸ್ಟ್ ಗೇಟ್ ಮೂಲಕ ಮತ್ತೆ ಜಲಾಶಯದಿಂದ ಹರಿಯುತ್ತಿರುವ ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 36.79 ಟಿಎಂಸಿ. ಹೇಮಾವತಿ ಜಲಾಶಯ ಒಟ್ಟು ನೀರಿನ ಮಟ್ಟ 37.103 ಟಿಎಂಸಿ..

 

ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.  ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತಗೊಂಡಿದು, ತಲಕಾವೇರಿ ಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಮಣ್ಣು ತೆರವು ಕಾರ್ಯಾಚರಣೆ ಮುಂದೂಡಿಕೆಯಾಗಿದೆ. ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.

 

Leave a Reply

Your email address will not be published.