Cricket : ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ : 3ನೇ ಟೆಸ್ಟ್ ನಲ್ಲಿ ಕೊಹ್ಲಿ ಆಡುವುದು ಅನಿಶ್ಚಿತ..?

ಗಾಯದಿಂದ ಬಳಲುತ್ತಿದ್ದ ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಸಂಪೂರ್ಣ ಫಿಟ್ ಆಗಿದ್ದಾರೆ. ನಾಟಿಂಗ್ ಹ್ಯಾಮ್ ನಲ್ಲಿ ಶನಿವಾರದಿಂದ ಆರಂಭಗೊಳ್ಳಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಆಗಸ್ಟ್ 18 ರಂದು 3ನೇ ಟೆಸ್ಟ್ ಶುರುವಾಗಲಿದ್ದು, ಅದಕ್ಕೂ ಮುನ್ನ ತಾವು ಪೂರ್ಣ ಫಿಟ್ ಆಗುವುದಾಗಿ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬರ್ಮಿಂಗ್ ಹ್ಯಾಮ್ ಹಾಗೂ ಲಾರ್ಡ್ಸ್ ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿರುವ ಭಾರತ, ಸರಣಿಯಲ್ಲಿ ಭಾರತ 2-0 ಹಿನ್ನಡೆ ಅನುಭವಿಸುತ್ತಿದ್ದು, ಜಸ್ಪ್ರೀತ್ ಬುಮ್ರಾ ಆಗಮನದಿಂದ ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ಕೊಂಚ ಬಲ ಪಡೆದುಕೊಳ್ಳಲಿದೆ.

ಜೂನ್ ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ವೇಳೆ ಜಸ್ಪ್ರೀತ್ ಬುಮ್ರಾ ಎಡಗೈ ಗಾಯಕ್ಕೆ ತುತ್ತಾಗಿದ್ದರು. ಗಾಯಗೊಂಡಿದ್ದ ಕಾರಣ ಇಂಗ್ಲೆಂಡ್ ವಿರುದ್ಧ ನಡೆದ ಟಿ-20, ಏಕದಿನ ಹಾಗೂ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಡಿರಲಿಲ್ಲ.

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಘೋಷಿಸಲಾಗಿದೆ.

23 thoughts on “Cricket : ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ : 3ನೇ ಟೆಸ್ಟ್ ನಲ್ಲಿ ಕೊಹ್ಲಿ ಆಡುವುದು ಅನಿಶ್ಚಿತ..?

Leave a Reply

Your email address will not be published.

Social Media Auto Publish Powered By : XYZScripts.com