ಸ್ವತಂತ್ರ ಸಂಗ್ರಾಮದಲ್ಲಿ ರಾಜ್ಯದ ಕೊಡುಗೆ ಅದ್ವಿತೀಯ : ಧ್ವಜಾರೋಹಣ ನೆರವೇರಿಸಿ ಸಿಎಂ ಹೇಳಿಕೆ

ದೇಶದೆಲ್ಲೆಡೆ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ಸ್ವಾತಂತ್ರ ಸಂಗ್ರಾಮದಲ್ಲಿ ರಾಜ್ಯದ ಕೊಡುಗೆ ಅದ್ವೀತೀಯವಾಗಿದೆ ‘ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

‘ ಸ್ವಾತಂತ್ರ ಸಂಗ್ರಾಮದಲ್ಲಿ ರಾಜ್ಯದ ಕೊಡುಗೆ ಅದ್ವೀತೀಯವಾಗಿದೆ, ರಾಜಕೀಯವಾಗಿ ಸಾಂಸ್ಕೃತಿಕವಾಗಿ ಎಲ್ಲಾ ರೀತಿಯಲ್ಲೂ ಕನ್ನಡಕ್ಕೆ ಕನ್ನಡವೇ ಸಾಟಿ. ಎಲ್ಲಾ ವೀರ ಸೇನಾನಿಗಳ ಪಾದಕಮಲಗಳಿಗೆ ನನ್ನ ನಮನ. ವೈವಿದ್ಯತೆಯಲ್ಲಿ ಏಕತೆ ಸಾಧಿಸಿದ ದೇಶ. ನಮ್ಮ ರಾಝ್ಯಾದ್ಯಂತ ಸಾವಿರ ರಂಗ ಪ್ರದರ್ಶನ  ಮಾಡಲಾಗುವುದು  ‘ಎಂದರು.

ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಶಿಕ್ಷಣ, ಆರೋಗ್ಯ, ವ್ಯವಸಾಯ, ಮಾಹಿತಿ ತಂತ್ರಜ್ಞಾನ, ಮೂಲಭೂತ ಅಭಿವೃದ್ಧಿ, ಅಲ್ಪಸಂಖ್ಯಾತ ಅಭಿವೃದ್ಧಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ಈಗಾಗಲೇ ಕೈಗೊಂಡಿರುವ ಯೋಜನೆಗಳು ಮತ್ತು ಮುಂಬರಲಿರುವ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು.

ನಾವು ಈಗಾಗಲೇ ರೈತರ ಸಾಲಮನ್ನಾ ಮಾಡಿದ್ದೇವೆ, ಸಾಲಮನ್ನಾ ಮಾಡಿರುವುದು ರೈತರ ವಿಶ್ವಾಸ ಹೆಚ್ಚಿಸಲು. ಈ ನಿಟ್ಟಿನಲ್ಲಿ ರೈತರ ಬೇಡಿಕೆಯನ್ನ ಸರ್ಕಾರ ಈಡೇರಿಸಿದೆ.  ಜೊತೆಗೆ ಇಸ್ರೇಲ್ ಮಾದರಿ ಕೃಷಿಯನ್ನು ಮತ್ತು ನೀರಾವರಿ ಯೋಜನೆಯನ್ನ ಕರ್ನಾಟಕದಲ್ಲಿ ಪರಿಚಯಿಸಿ ರೈತರನ್ನು ಸ್ವಾಲಂಬಿಯನ್ನಾಗಿ ಮಾಡಲು ಪ್ರಯತ್ನಗಳು ಈಗಾಗಲೇ ಶುರುವಾಗಿದೆ ಎಂದು ಅವರು ಹೇಳಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಉತ್ತಮ ಮಳೆಯಿಂದಾಗಿ ಈ ವರ್ಷ ಜಲಾಶಯಗಳು ತುಂಬಿವೆ. ಆದರೆ 13 ಜಿಲ್ಲೆ ಗಳಲ್ಲಿ ಬರಗಾಲದ ಪರಿಸ್ಥಿತಿ ಇದೆ. ಇನ್ನು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ 1 ಲಕ್ಷ ಉದ್ಯೋಗ ಸೃಷ್ಠಿಸುವ ಸಲುವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

 

Leave a Reply

Your email address will not be published.