ರಾಜ್ಯದಲ್ಲಿ ಮುಂಗಾರಿನ ಅಬ್ಬರ : ಮಳೆ ಹಾನಿ ಕುರಿತು ನಿಗಾ ವಹಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯಾದ್ಯಂತ ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕರಾವಳಿ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಮಡಿಕೇರಿ ಮೈಸೂರು ಭಾಗದ ಜನರು ಹೈರಾಣಾಗಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿವೆ. ಯಾವುದೇ ಹಾನಿ ಸಂಭವಿಸದಂತೆ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ  ಭಾರೀ ಮಳೆಯಾಗುತ್ತಿದ್ದು,  ಜನಜೀವನ ಅಸ್ತವ್ಯಸ್ತಗೊಂಡಿದೆ.  ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು ಜನರು ನಿದ್ದೆಯಿಲ್ಲದೆ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. ಜನರು ಮನೆಗೆ ನುಗ್ಗಿದ ನೀರನ್ನು ಹೊರಹಾಕುವಲ್ಲಿ ನಿರತರಾಗಿದ್ದಾರೆ.  ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.  ಪ್ರಕೃತಿ ಕಾನನ ಮಧ್ಯೆ ಮೈದುಂಬಿ ನಲಿಯುತ್ತಿರುವ ಜೋಗ ಜಲಪಾತ  ಸೊಬಗು ಸವಿಯಲು ಎರಡು ಕಣ್ಣುಗಳು ಸಾಲದೆಂಬಂತಿದೆ. ಜೋಗ ಜಲಪಾತ  ನೋಡಲು ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

Heavy rainfall: 14 Karnataka districts on high alert

ರಾಜ್ಯದ ಬಹುತೇಕ ಜಲಾಶಯಗಳು ತುಂಬಿದ್ದು, ಜಲಾಶಯಗಳಿಂದ ನೀರು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರಗಳಲ್ಲಿ ಪ್ರವಾಹ ರೀತಿಯ ಪರಿಸ್ಥಿತಿ ಏರ್ಪಟ್ಟಿದೆ. ಶಿರಾಡಿ, ಚಾರ್ಮುಡಿ ಘಾಟ್​ ರಸ್ತೆಗಳು ಗುಡ್ಡ ಕುಸಿತದಿಂದ ಬಂದ್​ ಆಗಿದ್ದು, ಹಲವೆಡೆ ನದಿಗಳು ಉಕ್ಕಿ ಹರಿದ ಪರಿಣಾಮ ಜನರು ಸಂಪರ್ಕ ಕಳೆದುಕೊಂಡಿದ್ದಾರೆ.ಮುಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related image

 Floodgates open up at KRS, Linganamakki crest gates opened after four years

ರಾಜ್ಯದೆಲ್ಲೆಡೆ ಭಾರೀ ಮಳೆಗೆ ಜನರು ಸಂಕಷ್ಟದಲ್ಲಿ ಸಿಲುಕ್ಕಿದ್ದು  ಕೊಡಗು, ಮೈಸೂರು, ಚಿಕ್ಕಮಂಗಳೂರು, ಉಡುಪಿ,ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿ ಮಳೆ ಹಾನಿ ಕುರಿತು ನಿಗಾ ವಹಿಸುವಂತೆ ಆದೇಶಿಸಿದ್ದಾರೆ. ಇನ್ನು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 237 ಕೋಟಿ ಹಣವನ್ನು ಮೀಸಲಿಟ್ಟಿದೆ.

 

Leave a Reply

Your email address will not be published.

Social Media Auto Publish Powered By : XYZScripts.com