ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಥಿತಿ ಗಂಭೀರ, ದೆಹಲಿಯತ್ತ ನಾಯಕರ ದೌಡು..

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ವಾಜಿಪೇಯಿ ಅವರ ಆರೋಗ್ಯ ವಿಚಾರಿಸಲು ಕರ್ನಾಟಕ ಸೇರಿದಂತೆ ದೇಶದ ಬಿಜೆಪಿ ಮುಖಂಡರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರ ಆರೋಗ್ಯವನ್ನ ವಿಚಾರಿಸಲಿದ್ದಾರೆ . ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡು ಬರುತ್ತಿಲ್ಲ ಎಂದು ಏಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್, ಕಾಂಗ್ರೆಸ್ ನಾಯಕ ಗುಲಾಂನಬಿ ಅಜಾದ್ ಅವರು ಸಹ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಜಾತಶತ್ರುವಿನ ಆರೋಗ್ಯ ವಿಚಾರಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ  ಬಿಜಪಿ ನಾಯಕರಗಿಂತ ಹೆಚ್ಚು ಸಲ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ವಿಚಾರಿಸಿದ್ದು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಮಾತ್ರ….

Leave a Reply

Your email address will not be published.

Social Media Auto Publish Powered By : XYZScripts.com