ಕಲಬುರಗಿ : ಮಳೆಯಿಂದಾಗಿ ಮನೆಯ ಗೋಡೆ ಕುಸಿತ : ತಾಯಿ, ಮಕ್ಕಳು ಸೇರಿ ಮೂವರ ಸಾವು

ಕಲಬುರ್ಗಿ : ಜಿಟಿ ಜಿಟಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಸೇರಿ ಮೂವ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿತ್ತಲಶಿರೂರ ಗ್ರಾಮದಲ್ಲಿ ನಡೆದಿದೆ.

30 ವರ್ಷದ ಲಕ್ಷ್ಮಿಬಾಯಿ ಮತ್ತು ಆಕೆಯ ಮಕ್ಕಳಾದ ಯಲ್ಲಮ್ಮ (9) ಹಾಗೂ 7 ವರ್ಷದ ಅಂಬಿಕಾ ಮೃತ ದುರ್ದೈವಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com