Big Breaking : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ..

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ.. ನವದೆಹಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಜಪೇಯಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಿಡ್ನಿ ಸೋಂಕು ಹಾಗೂ ಎದೆಭಾಗದ ರಕ್ತಸಂಚಯ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೂನ್ 11 ರಂದು ದೆಹಲಿಯ AIIMS ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾಯಂಕಾಲ 5 ಗಂಟೆ 5 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ. ಭಾರತದ ರಾಜಕಾರಣದಲ್ಲಿ ಅಜಾತಶತ್ರುವೆಂದೇ ಖ್ಯಾತರಾಗಿದ್ದ ಅವರು 10 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. 3 ಸಲ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com