ಪಂಚಭೂತಗಳಲ್ಲಿ ವಾಜಪೇಯಿ ಲೀನ : ಸಕಲ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..

ಸಕಲ ಸರ್ಕಾರೀ ಗೌರವಗಳೊಂದಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಯನ್ನು ಇಂದು ಸಾಂಯಂಕಾಲ ನವದೆಹಲಿಯ ಸ್ಮೃತಿ ಸ್ಥಳದಲ್ಲಿ ನೆರವೇರಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸಾಕು ಮಗಳು ನಮಿತಾ ಭಟ್ಟಾಚಾರ್ಯ ಅವರು ವಾಜಪೇಯಿ ಅವರ ಚಿತೆಗೆ ಅಗ್ನಿಸ್ಪರ್ಶ  ಮಾಡಿ ಅಂತ್ಯಕ್ರಿಯೆ ನೆರವೇರಿಸಿದರು.

Image result for atal bihari vajpayee pyre

ಬಳಿಕ ಗಾಳಿಯಲ್ಲಿ 21 ಸುತ್ತಿನ ಗುಂಡು ಹಾರಿಸಿ  ವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಅಗಲಿದ ಅಜಾತಶತ್ರುವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಈ ವೇಳೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ ‘ ದುಃಖದಲ್ಲಿ ಮಾತುಗಳೇ ಹೊರಡುತ್ತಿಲ್ಲ, ನಿಶ್ಚೇಷ್ಟಿತಬಾಗಿದ್ದೇನೆ. ತಂದೆಯನ್ನು ಕಳೆದುಕೊಂಡಂತಾಗಿದೆ ‘ ಎಂದು ಹೇಳಿದ್ದಾರೆ.

3 thoughts on “ಪಂಚಭೂತಗಳಲ್ಲಿ ವಾಜಪೇಯಿ ಲೀನ : ಸಕಲ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..

Leave a Reply

Your email address will not be published.