Cricket : 3ನೇ ಟೆಸ್ಟ್ ಆಡಲು ಕೊಹ್ಲಿ ಫಿಟ್ : ಬೆನ್ನು ನೋವಿನಿಂದ ಚೇತರಿಸಿಕೊಂಡ ಕ್ಯಾಪ್ಟನ್

ಬೆನ್ನು ನೋವಿನಿಂದ ಬಳಲುತ್ತಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಚೇತರಿಸಿಕೊಂಡಿದ್ದು, ಸಂಪೂರ್ಣ ಫಿಟ್ ಆಗಿದ್ದಾರೆ. ಶನಿವಾರದಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಲು ಉತ್ಸುಕರಾಗಿರುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಟೀಮ್ ಇಂಡಿಯಾದ ತರಬೇತಿಯಲ್ಲಿ ಭಾಗವಹಿಸಿದ ವಿರಾಟ್ ಮುಂದಿನ ಪಂದ್ಯದಲ್ಲಿ ಆಡುವುದನ್ನು ಇದಿರು ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಆಗಸ್ಟ್ 18 ಶನಿವಾರದಿಂದ ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ಕ್ರಿಕೆಟ್ ಮೈದಾನದಲ್ಲಿ 3ನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಪಡೆ ಈಗಾಗಲೇ 2-0 ಯಿಂದ ಹಿನ್ನಡೆ ಅನುಭವಿಸುತ್ತಿದ್ದು, ಆತಿಥೇಯ ಇಂಗ್ಲೆಂಡ್ ತಂಡಕ್ಕೆ ತಿರುಗೇಟ್ ನೀಡುವ ತವಕದಲ್ಲಿದೆ.

 

Leave a Reply

Your email address will not be published.

Social Media Auto Publish Powered By : XYZScripts.com