ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾದ ಈಶ್ವರಪ್ಪ…!

ಗುಂಡ್ಲುಪೇಟೆ : ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಕೆ. ಎಸ್​. ಈಶ್ವರಪ್ಪ  ಸಿವಿಲ್‌ ಹಾಗೂ ಜೆಎಂಎಫ್​ಸಿ ನ್ಯಾಯಾಲಯಕ್ಕೆ  ಹಾಜರಾಗಿದ್ದರು.

ಈ ಹಿಂದೆ ಇದ್ದ ವಿಚಾರಣೆಗೆ ಕೆ.ಎಸ್​.ಈಶ್ವರಪ್ಪ ಹಾಜರಾಗದ ಹಿನ್ನಲೆಯಲ್ಲಿ ನ್ಯಾಯಾಲಯ ವಾರೆಂಟ್​ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಗುರುವಾರ ನ್ಯಾಯಾಲಯಕ್ಕೆ ಹಾಜರಾದ ಈಶ್ವರಪ್ಪ, ತಮ್ಮ ಎಲ್ಲಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರ್ಗಾಹಿಸಿದ್ದಾರೆ.

Image result for eshwarappa in court

ಸಹಕಾರ ಸಚಿವರಾಗಿದ್ದ ಎಚ್‌.ಎಸ್‌.ಮಹದೇವಪ್ರಸಾದ್‌ ನಿಧನದ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಾಟಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಭಾಷಣ ಮಾಡಿದ್ದಾರೆಂದು ಅಂದಿನ ಸೆಕ್ಟರ್‌ ಮ್ಯಾಜಿಸ್ಟ್ರೇಟ್‌ ಚಿಕ್ಕಣ್ಣ ನೀತಿ ಸಂಹಿತೆ ಉಲ್ಲಂಘಿಸಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

 

 

Leave a Reply

Your email address will not be published.

Social Media Auto Publish Powered By : XYZScripts.com