ಚಿತ್ರದುರ್ಗ : ನಾಮಪತ್ರ ಸಲ್ಲಿಕೆ ವೇಳೆ ಕೈ ಅಭ್ಯರ್ಥಿ ಹಾಗೂ ಪೋಲೀಸರ ನಡುವೆ ವಾಗ್ವಾದ..!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ನಗರಸಭೆ ನಾಮಪತ್ರ ಸಲ್ಲಿಕೆ ವೇಳೆ ವಾಗ್ವಾದ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ. 22 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಬಾಬು ಅವರನ್ನು ಪೋಲೀಸರು ತಡೆದಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಜೊತೆ ನಾಲ್ವರಿಗೆ ಮಾತ್ರ ಅವಕಾಶ ಹಿನ್ನೆಲೆಯಲ್ಲಿ ರವಿಶಂಕರ್ ಬಾಬು ಪ್ರವೇಶಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದರು. ಬಡಾವಣೆ ಠಾಣೆ ಪಿಎಸ್ ಐ ರಘುನಾಥ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಬಾಬು ವಾಗ್ವಾದ ನಡೆಸಿದ್ದಾರೆ.

ಚಿತ್ರದುರ್ಗ ನಗರದ ಬಾಲಭವನದ ಕಟ್ಟಡದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಘಟನೆ ನಡೆದಿದೆ.

Leave a Reply

Your email address will not be published.