Cricket : ಟ್ರೆಂಟ್ ಬ್ರಿಡ್ಜ್ ಅಂಗಳದಲ್ಲಿ ಇಂದಿನಿಂದ 3ನೇ ಟೆಸ್ಟ್ : ಕೊಹ್ಲಿ ಪಡೆಗೆ ಅಗ್ನಿಪರೀಕ್ಷೆ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಾಟಿಂಗ್ ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಅಂಗಳದಲ್ಲಿ ಶನಿವಾರದಿಂದ ಮೂರನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಸೋತು ಈಗಾಗಲೇ ಸರಣಿಯಲ್ಲಿ 0-2 ರಿಂದ ಹಿನ್ನಡೆ ಅನುಭವಿಸುತ್ತಿರುವ ಕೊಹ್ಲಿ ಪಡೆಗೆ ಮತ್ತೊಂದು ಸವಾಲು ಎದುರಾಗಲಿದೆ.

ಬೆನ್ನು ನೋವಿನಿಂದ ಬಳಲುತ್ತಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಂಪೂರ್ಣ ಚೇತರಿಸಿಕೊಂಡಿದ್ದು, ಆಡಲು ಫಿಟ್ ಆಗಿದ್ದಾರೆ. ಎಡಗೈ ಗಾಯಕ್ಕೆ ಒಳಗಾಗಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ ಆಗಿ ತಂಡಕ್ಕೆ ಮರಳಿದ್ದು, ಟೀಮ್ ಇಂಡಿಯಾ ಬೌಲಿಂಗ್ ವಿಭಾಗಕ್ಕೆ ಕೊಂಚ ಮಟ್ಟಿನ ಬಲ ದೊರೆತಿದೆ.

ಯುವ ವಿಕೆಟ್ ಕೀಪರ್ ಹಾಗೂ ಸ್ಫೋಟಕ ಆರಂಭಿಕ ಬ್ಯಾಟ್ಸಮನ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ದಿನೇಶ್ ಕಾರ್ತಿಕ್ ಬದಲು ರಿಷಭ್ ಪಂತ್ ಅವರಿಗೆ ಪ್ಲೇಯಿಂಗ್ ಇಲೆವನ್ ನಲ್ಲಿ ಅವಕಾಶ ಸಿಗಬಹುದೆಂದು ನಿರೀಕ್ಷಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com