ವರುಣನ ರೌದ್ರನರ್ತನದಿಂದ ಆದ ನಷ್ಟ, ಪ್ರಾಣಹಾನಿ ಎಷ್ಟು..? ಇಲ್ಲಿದೆ ಸಿಎಂ ನೀಡಿದ ಮಾಹಿತಿ

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಾಜ್ಯದ್ಯಾಂತ ಜನರು ನಲುಗಿಹೋಗಿದ್ದು,  ಕೊಡಗು, ಹಾಗೂ ದಕ್ಷಿಣ ಕನ್ನಡ ಜಿಲ್ಲೆ ನರಕದಂತೆ ಸೃಷ್ಟಿಯಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹಲವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದು, ಇಲ್ಲಿವರೆಗೂ ಎಷ್ಟು  ಪ್ರಾಣಹಾನಿ ಆಗಿದೆ, ಎಷ್ಟು ನಷ್ಟ ಮಳೆಯಿಂದ  ಎಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, 11,421 ಮನೆಗಳಿಗೆ ಹಾನಿಯಾಗಿದೆ. 721 ಜಾನುವಾರುಗಳು ಸಾವಿಗೀಡಾಗಿವೆ. ಮನೆ ಕಳೆದುಕೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ರಜೆ ಹಾಕದೆ ಹಲವಾರು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 24 ಗಂಟೆಯೂ ಕಾರ್ಯಾಚರಣೆ ನಡೆಯುತ್ತಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 3, 4 ದಿನಗಳಲ್ಲಿ ವಿವರವಾದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಧಾರಕಾರ ಮಳೆಯಿಂದ  ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

Karnataka CM Kumaraswamy

ಕೊಡಗು ಜಿಲ್ಲೆಯಲ್ಲಿ ಸುಮಾರು 30 ಗಂಜಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತುರ್ತು ಕಾರ್ಯಾಚರಣೆಗೆ ಸಮಿತಿ ರಚಿಸಲಾಗಿದೆ. 47 ಯೋಧರು, 31 ಎನ್ ಡಿಆರ್ ಎಫ್, ಅಗ್ನಿಶಾಮಕ ದಳದ 525 ಮಂದಿ ಸೇರಿದಂತೆ ಒಟ್ಟು ಒಂದು ಸಾವಿರ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ, 2, 50, 000 ಲೀಟರ್ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗಿದೆ, ಸುಮಾರು 200ಕ್ಕೂ ಅಧಿಕ ಎಕರೆ ಜಾಗ ಭೂಕುಸಿತವಾಗಿದೆ, 2,500 ಜನರನ್ನು ರಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಂದ ವೈದ್ಯರ ತಂಡಗಳನ್ನು ಕಳುಹಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 2060 ಮಂದಿ ಆಶ್ರಯ ಪಡೆಯುತ್ತಿದ್ದಾರೆ.

ಕೊಡಗಿಗೆ ತಕ್ಷಣಕ್ಕೆ ನೂರು ಕೋಟಿ ರೂಪಾಯಿ ಬಿಡುಗಡೆಗೆ ಮಾಡುವುದಾಗಿ ಆದೇಶ ನೀಡಿದ್ದು, ಈಗಾಗಲೇ 30 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ, ಹಾಗೂ ಈ ಹಣವನ್ನು ದುರುಪಯೋಗ ಮಾಡಲು ನಾನು ಅವಕಾಶ ನೀಡುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕಿನ ಇಗ್ಗೋಡ್ಲು ಗ್ರಾಮವನ್ನು ರಕ್ಷಿಸಲು 85 ಯೋಧರು ದೌಡಾಯಿಸಿದ್ದು ಅಲ್ಲಿಂದ ಮುಕ್ಕೋಡ್ಲಿಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಮುಕ್ಕೋಡ್ಲುವಿನಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯಕ್ಕಾಗಿ ಸೇನಾಪಡೆ ತೆರಳಿದೆ ಎಂದು ತಿಳಿದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com